ಶೃಂಗೇರಿ ಮರುಎಣಿಕೆ: ಕಾಂಗ್ರೆಸ್‌ಗೆ ಮುಖಭಂಗ; ಡಿಕೆಶಿ ಆರೋಪಕ್ಕೆ ಜೀವರಾಜ್ ಸಾಕ್ಷ್ಯಸಮೇತ ತಿರುಗೇಟು!

ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆಗಳ ಮತಗಳ ಮರು ಎಣಿಕೆ ಪ್ರಕ್ರಿಯೆ ಬಳಿಕ ವಿಜಯಶಾಲಿಯಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಹೊರಹೊಮ್ಮಿದ್ದಾರೆ.

ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆಗಳ ಮತಗಳ ಮರು ಎಣಿಕೆ ಪ್ರಕ್ರಿಯೆ ಬಳಿಕ ವಿಜಯಶಾಲಿಯಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಹೊರಹೊಮ್ಮಿದ್ದಾರೆ. ಈ ರಾಜಕೀಯ ಬೆಳವಣಿಗೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಇದು ಸಂಪೂರ್ಣ ದೇಶದಲ್ಲೇ ನಡೆದ ಮೊದಲ ಘಟನೆಯಾಗಿದ್ದು, ಈ ಬಗ್ಗೆ ಕಾನೂನು ಸಮರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್​ರ ಈ ಎಚ್ಚರಿಕೆಯ ಬೆನ್ನಲ್ಲೇ ಶೃಂಗೇರಿ ಶಾಸಕ ಡಿ.ಎನ್​ ಜೀವರಾಜ್​, 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ನಡೆದ ಅಕ್ರಮಗಳ ಬಗ್ಗೆ ಸಾಕ್ಷ್ಯ ಸಮೇತ ವಿವರಣೆಯನ್ನು ನ್ಯಾಯಾಲಯ ಹಾಗೂ ಸಾರ್ವಜನಿಕರ ಎದುರು ನೀಡಿದ್ದಾರೆ. 2023ರಲ್ಲಿ ಅಂಚೆ ಮತಗಳ ಎಣಿಕೆ ಮಾಡುತ್ತಿದ್ದ ಸಂದರ್ಭದಲ್ಲಿ ನನಗೆ ಹೆಚ್ಚು ಮತಗಳೇ ಬಂದಿದ್ದವು. ಆದರೆ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ 135 ಸ್ಥಾನ ಗೆಲ್ಲುತ್ತಿದ್ದಂತೆಯೇ ಇಲ್ಲಿನ ಅಧಿಕಾರಿಗಳು ಕಾಂಗ್ರೆಸ್​ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಮಾಡಲು ಆರಂಭಿಸಿದರು. ಹೆಚ್ಚುವರಿ ಮತಗಳನ್ನು ಅವರಿಗೆ ಸೇರಿಸಿದರು. ಎಲ್ಲಾ ಅಸಿಂಧು ಮತಗಳನ್ನು ಕಾಂಗ್ರೆಸ್​ ಅಭ್ಯರ್ಥಿಗೆ ಮಾನ್ಯ ಮಾಡಿದರು. ಹೀಗಾಗಿ ನಾನು ಕಾನೂನು ಸಮರಕ್ಕೆ ಮುಂದಾದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಪ್ಪಿತಪ್ಪಿ ಹಾಗಲಕಾಯಿ ಜೊತೆ ಇವು ತಿನ್ನಬೇಡಿ: ಹುಷಾರ್ ಆರೋಗ್ಯಕ್ಕೆ ಅಪಾಯ!

ಇನ್ನು ಇದೇ ಸಂದರ್ಭದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಈಗ ತಡೆ ನೀಡಿದ್ದು ಜೀವರಾಜ್​ ಮತ್ತೊಂದು ಮುನ್ನಡೆ ಸಾಧಿಸಿದಂತಾಗಿದೆ. ಮಾಜಿ ಶಾಸಕ ಡಿ.ಎನ್. ಜೀವರಾಜ್, ಅಂದಿನ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹಾಗೂ ಚುನಾವಣಾಧಿಕಾರಿ ವೇದಾಮೂರ್ತಿ ಅವರ ವಿರುದ್ದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಕಾನೂನು ಕ್ರಮ ಜರುಗಿಸಲಾಗಿತ್ತು, ಆದರೆ ಈಗ ನ್ಯಾಯಾಲಯವು ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ಬಿಗ್​ ರಿಲೀಫ್​ ನೀಡಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories