SSLC exam: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ : ಏಪ್ರಿಲ್ 1ರಿಂದ ಎಕ್ಸಾಂ ಶುರು

ಬೆಂಗಳೂರು: SSLC exam: 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಅಂತಿಮ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಇಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 1ರಂದು ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಏಪ್ರಿಲ್ 15ರವರೆಗೆ ನಡೆಯಲಿವೆ.

ಏಪ್ರಿಲ್ 1ರಂದು ಪ್ರಥಮ ಭಾಷೆಗಳ ಪರೀಕ್ಷೆ ನಡೆಯಲಿದೆ. ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕøತ ಭಾಷೆಗಳಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಭಾಷೆಗೆ ಪರೀಕ್ಷೆ ಬರೆಯಲಿದ್ದಾರೆ. ಏಪ್ರಿಲ್ 2 ಭಾನುವಾರ, ಏಪ್ರಿಲ್ 3ರ ಸೋಮವಾರ ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆಗಳು ಇರುವುದಿಲ್ಲ. ಏಪ್ರಿಲ್ 4ರಂದು ಗಣಿತ ಪರೀಕ್ಷೆ ನಡೆಯಲಿದೆ. ಏಪ್ರಿಲ್ 5ರಂದು ಪರೀಕ್ಷೆ ಇರುವುದಿಲ್ಲ. ಏಪ್ರಿಲ್ 6ರಂದು ದ್ವಿತೀಯ ಭಾಷೆ, ಏಪ್ರಿಲ್ 7ರಂದು ಗುಡ್ ಫ್ರೈಡ್ ಹಿನ್ನೆಲೆ ಪರೀಕ್ಷೆ ನಡೆಯಲ್ಲ. ಏಪ್ರಿಲ್ 10ರಂದು ವಿಜ್ಞಾನ, ಏಪ್ರಿಲ್ 12ರಂದು ತೃತೀಯ ಭಾಷೆ, ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಈ ಸುತ್ತೋಲೆ ಹೊರಡಿಸಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಅಥವಾ ಪೋಷಕರಿಂದ ಆಕ್ಷೇಪಣೆ ಇದ್ದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. [email protected] ಅಥವಾ [email protected] ಮೂಲಕ ಅರ್ಜಿ ಆಕ್ಷೇಪಣೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು- 560003 ಈ ವಿಳಾಸಕ್ಕೆ ಅರ್ಜಿ ಕಳಿಸುವಂತೆ ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 28 ಕೊನೆಯ ದಿನವಾಗಿದ್ದು, ಆ ಬಳಿಕ ಬಂದ ಆಕ್ಷೇಪಣೆ ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಸುತ್ತೋಲೆಯಲ್ಲಿ ತಿಳಿಸಿದೆ.

sslc annual exam provisional time table released exams starts from april 1st 2

ಇದನ್ನೂ ಓದಿ : Central Railway Recruitment 2022 : ಸೆಂಟ್ರಲ್‌ ರೇಲ್ವೇಯಲ್ಲಿ ಗೂಡ್ಸ್‌ ಗಾರ್ಡ್‌, ಕ್ಲರ್ಕ್‌, ಸ್ಟೆನೋ ಸೇರಿದಂತೆ 596 ಹುದ್ದೆಗಳಿಗೆ ಅರ್ಜಿ ಆಹ್ವಾನ

sslc annual exam provisional time table released exams starts from april 1st 2

ಇದನ್ನೂ ಓದಿ: Ashwini Puneeth Rajkumar : ಅಪ್ಪು ಮೊದಲ ವರ್ಷ ಪುಣ್ಯಸ್ಮರಣೆ : ವೈರಲ್ ಆಯ್ತು ಅಶ್ವಿನಿ ಪುನೀತ್ ರಾಜ್ ಕುಮಾರ್ ಪತ್ರ

ಇದನ್ನೂ ಓದಿ: Drinik Virus : ಬ್ಯಾಂಕ್‌ ಗ್ರಾಹಕರೇ ಎಚ್ಚರ! ಇದು ನಿಮ್ಮ ಬ್ಯಾಂಕಿಂಗ್‌ ಮಾಹಿತಿಯನ್ನು ಕದಿಯಬಹುದು

sslc annual exam provisional time table released: exams starts from april 1st

Comments are closed.