State Congress Govt : ಶಕ್ತಿ ಯೋಜನೆಯಿಂದ 2.5ಕೋಟಿ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು : (State Congress Govt) ರಾಜ್ಯದ ಕಾಂಗ್ರೆಸ್‌ ಸರಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಕರ್ನಾಟಕದಲ್ಲಿ ಜಾರಿಗೆ ಬಂದಿದೆ. ಈ ಯೋಜನೆಯಿಂದ ರಾಜ್ಯದ 2.5ಕೋಟಿ ಮಹಿಳೆಯರಿಗೆ ಅನುಕೂಲವಾಗಲಿದೆ. ಅಲ್ಲದೇ ನಿತ್ಯವೂ 41 ಲಕ್ಷ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ಸರಕಾರ ಮುಖ್ಯ ಕಾರ್ಯದರ್ಶಿಗಳಿಗೆ ಟಿಕೆಟ್‌ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ವಿಧಾನಸೌಧದಿಂದ ಮೆಜಿಸ್ಟಿಕ್‌ ವರೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದರು. ಅಲ್ಲದೇ ನಾಲ್ಕು ವಲಯದ ಬಸ್ಸುಗಳಲ್ಲಿ ಉಚಿತ ಟಿಕೆಟ್‌ ನೀಡುವ ಮೂಲಕ ರಾಜ್ಯದಾದ್ಯಂತ ಯೋಜನೆಗೆ ಚಾಲನೆ ನೀಡಿದ್ದರು. ಭಾನುವಾರ ಮಧ್ಯಾಹ್ನದಿಂದಲೇ ಮಹಿಳೆಯರು ರಾಜ್ಯದಾದ್ಯಂತ ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

ರಾಜ್ಯದಲ್ಲಿನ ಒಟ್ಟು 2.5 ಕೋಟಿ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲಿದ್ದು, ನಿತ್ಯವೂ 41 ಲಕ್ಷ ಮಹಿಳೆಯರು ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ರಾಜ್ಯದಲ್ಲಿನ ಒಟ್ಟು 18609 ಬಸ್ ನಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶವಿದ್ದು ಕೆಎಸ್‌ಆರ್‌ಟಿಸಿ (KSRTC) 14.43 ಲಕ್ಷ ಮಹಿಳೆಯರು ನಿತ್ಯವೂ ಪ್ರಯಾಣಿಸುತ್ತಿದ್ದರೆ, ಬಿಎಂಟಿಸಿ (BMTC) 10.86 ಲಕ್ಷ ಮಹಿಳೆಯರು, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ 9.12 ಲಕ್ಷ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ 7.41 ಲಕ್ಷ ಮಂದಿ ನಿತ್ಯವೂ ಪ್ರಯಾಣಿಸುತ್ತಿದ್ದಾರೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : KCET Results 2023 : ಕರ್ನಾಟಕ ಸಿಇಟಿ ಫಲಿತಾಂಶ ಈ ದಿನಾಂಕದಂದು ಪ್ರಕಟ : ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಶಕ್ತಿ ಯೋಜನೆಯ ಮೂಲಕ ಸಾರಿಗೆ ಇಲಾಖೆಯ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಮಹಿಳೆಯರಿಗೆ ಸರಕಾರ ನೀಡಿರುವ ಯಾವುದೇ ದಾಖಲೆಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಆದರೆ ಅಂತರ್‌ರಾಜ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಮಹಿಳೆಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಶಕ್ತಿ ಯೋಜನೆಯ ಬಸ್ಸುಗಳಲ್ಲಿ ಸ್ಟಿಕರ್‌ ಅಳವಡಿಸಿದೆ. ಇನ್ನೊಂದೆಡೆ ಬಿಎಂಟಿಸಿ ಹೊರತು ಪಡಿಸಿ ಉಳಿದ ಎಲ್ಲಾ ಬಸ್ಸುಗಳಲ್ಲಿಯೂ ಶೇ.೫೦ ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲು ಇಡಲಾಗಿದೆ. ರಾಜ್ಯದಲ್ಲಿನ ಪಯಣ್ಯಕ್ಷೇತ್ರಗಳಿಗೆ ಭೇಟಿ ನೀಡುವವರಿಗೆ, ಪ್ರವಾಸಕ್ಕೆ ತೆರಳುವವರಿಗೆ ಈ ಯೋಜನೆಯಿಂದ ಲಾಭವಾಗಲಿದೆ. ಅಲ್ಲದೇ ನಿತ್ಯವೂ ಕೆಲಸಕ್ಕೆ ತೆರಳುವ ಮಹಿಳೆಯರಿಗೆ ಈ ಯೋಜನೆ ವರದಾನವಾಗಿ ಪರಿಣಮಿಸಿದೆ.

State Congress Govt: Free travel for 2.5 crore women under Shakti Yojana

Comments are closed.