GOOD NEWS : ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ : ಮುಂಬಡ್ತಿ ಕುರಿತು ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಸಚಿವ‌ ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆ ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಇರುವುದು ನಿಜ. ಆದರೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು‌. ರಾಜ್ಯದಲ್ಲಿ 25ರಿಂದ ಕಿರಿಯ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: GOOD NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ರಾಜ್ಯದಾದ್ಯಂತ ಸೋಮವಾರದಿಂದಲೇ ಬಿಸಿಯೂಟದ ಯೋಜನೆಯನ್ನು ಆರಂಭ ಮಾಡಲಾಗುತ್ತಿದೆ. 1ರಿಂದ 10ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೂಡ ಬಿಸಿಯೂಟದ ಯೋಜನೆಯನ್ನು ನೀಡಲಾಗುತ್ತದೆ. ಕಿರಿಯ ಪ್ರಾಥಮಿಕ ಶಾಲಾರಂಭದ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭಗೊಳ್ಳುತ್ತಿದ್ದರೂ ಕೂಡ ಹಾಜರಾತಿಯನ್ನು ಕಡ್ಡಾಯಗೊಳಿಸಿಲ್ಲ. ಮಕ್ಕಳು ಶಾಲೆಗೆ ಹಾಜರಾಗಬೇಕಾದ್ರೆ ಕಡ್ಡಾಯವಾಗಿ ಪೋಷಕರು ಅನುಮತಿ ಪತ್ರವನ್ನು ನೀಡಬೇಕು. ಅಲ್ಲದೇ ಶಿಕ್ಷಕರಿಗೆ ಕಡ್ಡಾಯ ವ್ಯಾಕ್ಸಿನ್, ಶಾಲೆಗಳಲ್ಲಿ ಸಾಮಾಜಿಕ ಅಂತರ,‌ ಮಾಸ್ಕ್ ಬಳಕೆ‌‌‌‌ ಸೇರಿದಂತೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಇದನ್ನೂ ಓದಿ: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ : ಖ್ಯಾತ ವಕೀಲನ ವಿರುದ್ದ FIR

(Good news for school teachers: Education Minister Nagesh gives good news on promotion)

Comments are closed.