ರಾಮನಗರ : ಸೊಂಟಕ್ಕೆ ವೇಲ್ ಕಟ್ಟಿಕೊಂಡು ಪ್ರೇಮಿಗಳು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ನಡೆದಿದೆ.
ಚಂದನಾ (21 ವರ್ಷ), ಸತೀಶ್(21 ವರ್ಷ ) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಕೂಡ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಾನ್ ನಿವಾಸಿಗಳು ಎಂದು ತಿಳಿದುಬಂದಿದೆ.
ಸತೀಶ್ ಹೊಸೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದು, ಇಬ್ಬರೂ ಕೂಡ ಕಳೆದ ಮೂರು ವರ್ಷಗಳಿಂದ ಇಬ್ಬರೂ ಪ್ರೀತಿಸಿದ್ದರು. ಆದರೆ ಒಂದು ವರ್ಷದ ಹಿಂದೆ ಕನಕಪುರದ ಯುವಕನೊಂದಿಗೆ ಚಂದನಾ ಮದುವೆ ಮಾಡಲಾಗಿತ್ತು.
ಇದನ್ನೂ ಓದಿ: Petrol Tanker Accident : ಚಾರ್ಮಾಡಿ ಘಾಟಿಯಲ್ಲಿ ಪಲ್ಟಿ : ತಪ್ಪಿದ ಭಾರೀ ದುರಂತ
ಸೆಪ್ಟೆಂಬರ್ 22 ರಂದು ಗಂಡನ ಮನೆಯಿಂದ ಚಂದನಾ ನಾಪತ್ತೆಯಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಾಳು ಬೆಟ್ಟದಿಂದ ಜಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
(Lovers’ suicide by jumping off a hill)