Karnataka Weather Report : ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ : ಇನ್ನೂ ಎರಡು ದಿನ ಭಾರಿ ಮಳೆ, 16 ಜಿಲ್ಲೆಯಲ್ಲಿ Yellow ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚಿಸುತ್ತಿಲ್ಲ. ಸಿಲಿಕಾನ್‌ ಸಿಟಿ ಬೆಂಗಳೂರು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿಸಿದೆ. ಅಲ್ಲದೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಮಳೆಯ ಪ್ರಯಾಣ ಹೆಚ್ಚಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: Karnataka Weather Report : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಅಕ್ಟೋಬರ್ 16 ಮತ್ತು 17 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೊಡಕಾಗಿದೆ. ಕರಾವಳಿ ಭಾಗದಲ್ಲಿ ಭತ್ತದ ಪೈರು ಬೆಳೆದು ನಿಂತಿದ್ದು, ಕಟಾವು ಕಾರ್ಯಕ್ಕೆ ತೊಡಕಾಗಿ ಪರಿಣಮಿಸಿದೆ. ಇನ್ನೂ ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅನಾವೃಷ್ಟಿಯಿಂದಾಗಿ ಹಲವು ಬೆಳೆಗಳು ನೆಲಕಚ್ಚಿವೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕೃಷಿಕರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: Murudeshwara : ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ

(Karnataka Weather Report)

Comments are closed.