Karnataka Weather Report : ಕರ್ನಾಟಕದಲ್ಲಿ ಎರಡು ದಿನ ಭಾರೀ ಮಳೆ: ಯೆಲ್ಲೋ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಕೊಡುವ ಲಕ್ಷಣ ಗೋಚರಿಸುತ್ತಿಲ್ಲ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಿಸಿದೆ.

ರಾಜ್ಯದ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುತ್ತಿದೆ. ಶಾಹೀನ್‌ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮಳೆ ಆಕ್ಟೋಬರ್‌ 7ರ ವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ: Karnataka Weather Report : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 4 ದಿನ ಭಾರೀ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಂದು ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವು ಕಡೆಗಳಲ್ಲಿ ಜನ ಜೀವನ ಅಸ್ತವ್ಯಸ್ಥವಾಗಿದೆ. ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Free Sand : ಉಚಿತ ಮರಳು ನೀಡೋದಾಗಿ ಆಶ್ವಾಸನೆ ಕೊಟ್ಟು, ಕೈಕೊಟ್ಟ ಸಚಿವರು

(Karnataka Weather Report)

Comments are closed.