ಬೆಂಗಳೂರು : ಕರ್ನಾಟಕ ರಾಜ್ಯದಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಕರುನಾಡಲ್ಲಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಮುಖ್ಯ ಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಸಮಸ್ತ ಜನತೆಗೆ ಶುಭಾಶಯವನ್ನು ಕೋರಿದ್ದು, ಕನ್ನಡಿಗರಲ್ಲಿ ಕನ್ನಡಾಭಿಮಾನ ಸದಾ ಇರಲಿ ಎಂದಿದ್ದಾರೆ.
ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಟ್ವಿಟ್ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ನಾಡಿನ ಸಮಸ್ತ ಜನತೆಗೆ 66 ನೇ ಕನ್ನಡ ರಾಜ್ಯೋತ್ಸವವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ಕನ್ನಡ ರಾಜ್ಯೋತ್ಸವವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಆಸ್ಮಿತೆ ಸದಾ ಜಾಗೃತವಾಗಿರಲಿ. ಕನ್ನಡ ಅಭಿಮಾನ ನಿರಂತರವಾಗಿರಲಿ ಎಂದು ಶುಭ ಕೋರಿದ್ದಾರೆ.
ಕರ್ನಾಟಕ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ನಡೆಸುತ್ತಿರುವ ಕರ್ನಾಟಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಈ ವರ್ಷವೂ ಇಂದು ಸಂಜೆ 6 ಗಂಟಗೆ ನಡೆಯಲಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕರ್ನಾಟಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಸಚಿವ ಸುನೀಲ್ ಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Award 2021) ಪ್ರಶಸ್ತಿಯ ಪಟ್ಟಿಯನ್ನು ರಾಜ್ಯ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ.
ಇದನ್ನೂ ಓದಿ: DA Hike : ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ : ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರಕಾರದ ಆದೇಶ
66 ವಿವಿಧ ವಲಯದ ಸಾಧಕರಿಗೆ ಹಾಗೂ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂಧರ್ಭದಲ್ಲೇ ರಾಷ್ಟ್ರದಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ 2021ಅನ್ನು ನೀಡಿ ಗೌರವಿಸಲಾಗುತ್ತಿದೆ.
(May Kannada pride always be among Kannadigas: Chief Minister Basavaraj Bommai)