ಅಧಿಕಾರಿಗಳು, ಜನಪ್ರತಿನಿಧಿಗಳು ಸಾರ್ವಜನಿಕರ ಕರೆ ಸ್ವೀಕರಿಸಲೇ ಬೇಕು : ರಾಜ್ಯ ಸರಕಾರದ ಆದೇಶ

ಬೆಂಗಳೂರು: ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ತಿಳಿಸಲು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕರೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಉತ್ತರ ನೀಡುವುದಿಲ್ಲಾ. ಅಲ್ಲದೇ ರಾಜ್ಯದ ಅನೇಕ ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಾರ್ವಜನಿಕರ ದೂರವಾಣಿ ಕರೆಗಳನ್ನು ಸ್ವೀಕರಿಸೋದೆ ಇಲ್ಲ. ಇಂತಹ ಅಧಿಕಾರಿಗಳಿಗೆ ಇದೀಗ ರಾಜ್ಯ ಸರಕಾರ ಬಿಸಿಮುಟ್ಟಿಸಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ಕರೆಗಳನ್ನು ಸ್ವೀಕರಿಸಿ, ಚಾಚು ತಪ್ಪದೇ ನಿಯಮಾನುಸಾರ ಸಮಸ್ಯೆಗಳ ಕುರಿತಂತೆ ಕ್ರಮ ಕೈಗೊಳ್ಳುವಂತೆ ಖಡಕ್ ಎಚ್ಚರಿಕೆ ನೀಡಿದೆ.

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸುತ್ತೋಲೆ ಹೊರಡಿಸಿದ್ದು, ಕಂದಾಯ ಇಲಾಖೆಯು ರಾಜ್ಯ ಮತ್ತು ಸಮಾಜದ ಪ್ರಮುಖವಾದ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ಜನ ಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಜೊತೆ ನಿಕಟ ಸಂಪರ್ಕ ಹಾಗೂ ಸಂಬಂಧ ಹೊಂದಿರುವ ಜನಸ್ನೇಹಿ ಇಲಾಖೆಯಾಗಿದೆ.

ಇದನ್ನೂ ಓದಿ: Karnataka Weather Report : ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆಗೆ 3 ಬಲಿ : ಇಂದು ಯೆಲ್ಲೋ ಆಲರ್ಟ್‌

ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಗ್ರಾಮಲೆಕ್ಕಿಗರಿಂದ ರಾಜಸ್ವ ನಿರೀಕ್ಷಕರು, ಉಪ ತಹಶೀಲ್ದಾರ್, ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನೇರವಾಗಿ ಜನರ ಹಾಗೂ ಜನಪ್ರತಿನಿಧಿಗಳ ಸಂಪರ್ಕದಲ್ಲಿರುತ್ತಾರೆ. ಮುಖ್ಯವಾಗಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಪ್ರಥಮ ಹಂತದಲ್ಲಿನ ಪ್ರಮುಖ ಕಾರ್ಯ ತಹಶೀಲ್ದಾರ್ ದಾಗಿರುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ತಹಶೀಲ್ದಾರರುಗಳು ಸ್ವೀಕರಿಸದಿರುವ ವಿಷಯವು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಇನ್ಮುಂದೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಕರೆ ಬಂದಲ್ಲಿ, ಅಧಿಕೃತವಾಗಿ ಕರೆಗಳನ್ನು ಸ್ವೀಕರಿಸಿ, ಸದರಿ ಅಹವಾಲು, ಮನವಿಗಳಿಗೆ ಹೆಚ್ಚು ಗಮನ ನೀಡಿ, ಕಾನೂನಿನ ವ್ಯಾಪ್ತಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳತಕ್ಕದ್ದು. ಒಂದು ವೇಳೆ ಕರೆಗಳನ್ನು ಸಕಾಲದಲ್ಲಿ ಸ್ವೀಕರಿಸಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಸಾರ್ವಜನಿಕರಿಗೆ ತಲುಪಿಸುವ ಸೇವೆಗಳಲ್ಲಿ ಏರು ಪೇರು ಉಂಟಾಗುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ತಪ್ಪಿದ ಕರೆಗಳಿಗೆ ಮರು ಕರೆ ಮಾಡಿ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಮಕ್ಕಳಿಗೆ ಜನ್ಮ ನೀಡಲ್ಲ, ಒಬ್ಬಂಟಿಯಾಗಿರಲು ಬಯಸುತ್ತಾರೆ : ಸಚಿವ ಸುಧಾಕರ್‌

ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಸ್ವೀಕೃತವಾಗುವ ಕರೆಯ ಕೋರಿಕೆ, ಮನವಿಗಳನ್ನು ಕಂದಾಯ ಇಲಾಖೆಯ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು, ಉಪ ತಹಶೀಲ್ದಾರರು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರಾಧಿಯಾಗಿ ಚಾಚೂ ತಪ್ಪದೇ ನಿಯಮಾನುಸಾರ ಕ್ರಮ ಕೈಗೊಳ್ಳತಕ್ಕದ್ದು. ಜನಪ್ರತಿನಿಧಿಗಳಿಗೆ ಅಗೌರವ ತೋರಿಸುವುದು ಕಂಡುಬಂದಲ್ಲಿ, ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು ಹಾಗೂ ಹಕ್ಕುಚ್ಯುತಿ ಉಂಟಾಗುವ ಸಾಧ್ಯತೆ ಇರುವುದರಿಂದ ಇದಕ್ಕೆ ಅವಕಾಶ ನೀಡದಂತೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಬರುವ ಕರೆಗಳನ್ನು ಅಧಿಕೃತವಾಗಿ ಸ್ವೀಕರಿಸಿ, ಅಪೇಕ್ಷಿತ ಮಾಹಿತಿಯನ್ನು ನೀಡುವಂತೆ ಸೂಚಿಸಿದೆ.

(Officials, representatives should receive public calls: State Government order)

Comments are closed.