ಇನ್ಮುಂದೆ ಕಟ್ಟಡ ನಿರ್ಮಾಣಕ್ಕಿಲ್ಲ ಮರಳಿನ ಸಮಸ್ಯೆ : ಗ್ರಾಮೀಣ ಜನರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿನ ಜನರು ಮರಳಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಕಟ್ಟಡ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಈ ನಿಟ್ಟಿನಲ್ಲಿ ಮರಳು ನೀತಿ ಸರಳೀಕರಿಸುವ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.

ಹಳ್ಳ, ಕೊಳ್ಳಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಗ್ರಾಮ ಪಂಚಾಯಿತಿಯಿಂದ ಅನುಮತಿ ನೀಡಲು ಅನುಕೂಲವಾಗುವಂತೆ ಮರಳು ನೀತಿ ಸರಳೀಕರಣ ಮಾಡಲಾಗುವುದು ಎಂದಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: CM Bommai Warning : ಬಿಜೆಪಿ ಶಾಸಕಾಂಗ ಸಭೆ : ಶಾಸಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಸಿಎಂ ಬೊಮ್ಮಾಯಿ

ಹೊಸ ಮರಳು ನೀತಿಯಿಂದಾಗಿ ಗ್ರಾಮೀಣ ಭಾಗದಲ್ಲಿ ಮರಳು ಸಮಸ್ಯೆ ಬಗಗೆಹರಿಯಲಿದೆ. ಇದರೊಂದಿಗೆ ಹಲವು ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: HDFC BANK : ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಭರ್ಜರಿ ಗುಡ್‌ ನ್ಯೂಸ್

(The problem of sand: Goodnews for rural people)

Comments are closed.