ಸೋಮವಾರ, ಏಪ್ರಿಲ್ 28, 2025
Homekarnatakaಮಹಿಳೆಗೆ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ : ಇಬ್ಬರ ಬಂಧನ

ಮಹಿಳೆಗೆ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ : ಇಬ್ಬರ ಬಂಧನ

- Advertisement -

ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧಕ್ಕಾಗಿ ಕಾನೂನು ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಗಂಭೀರ ಚಿಂತನೆ ನಡೆದಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಆದರೆ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೋಗ ಫಾಲ್ಸ್ ನ ಅನಿಲ್ ಕುಮಾರ್ ಮತ್ತು ಅವರ ಪತ್ನಿ ಪ್ರಶಾಂತಿ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Tumkur : ಹೈಟೆಕ್‌ ವೇಶ್ಯಾವಾಟಿಕೆ ಜಾಲ ಬಯಲು : ಸುರಂಗದಲ್ಲಿ ಅವಿತಿದ್ದರು ಸುಂದರಿಯರು

ತಾಳಗುಪ್ಪದ ಜ್ಯೋತಿ ಎಂಬವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: Whatsapp Crime : ಮಗನ ಶಾಲಾ ವಾಟ್ಸಾಪ್ ಗ್ರೂಪ್‌ಗೆ ಅಶ್ಲೀಲ ಚಿತ್ರ, ವಿಡಿಯೋ ಕಳುಹಿಸಿದ ವ್ಯಕ್ತಿ ಅರೆಸ್ಟ್‌

(Attempted conversion of woman: arrest of two)

RELATED ARTICLES

Most Popular