ಹಾವೇರಿ : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯಲಿದೆ. ಮತದಾನದ ಹಕ್ಕು ಚಲಾಯಿಸಲು ರಾಜ್ಯ ಸರ್ಕಾರ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಮುಂದಾಗಿದೆ. ಈ ಕುರಿತು ರಾಜ್ಯ ಸರಕಾರ ಮಹತ್ವದ ಘೋಷಣೆಯನ್ನು ಮಾಡಿದೆ.
ಹಾನಗಲ್ ತಾಲೂಕಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟೀಕೃತ ಮತ್ತು ಇತರ ಬ್ಯಾಂಕುಗಳ, ರಾಜ್ಯ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕ ಸಂಸ್ಥೆಗಳು ಹಾಗೂ ಸರಕಾರಿ ಸಂಘ ಸಂಸ್ಥೆಗಳು. ಎಲ್ಲಾ ರೀತಿಯ ವ್ಯವಹಾರಿಕ ಸಂಸ್ಥೆಗಳು, ದಿನಗೂಲಿ ಕಾರ್ಮಿಕರಿಗೆ. ಅಕ್ಟೋಬಾರ್ 30 ಶನಿವಾರದಂದು ಪ್ರಜಾ ಪ್ರತಿನಿಧಿ ಕಾಯ್ದೆ 1951 ಸೆಕ್ಷನ್ 135ಬಿ ಅಡಿಯಲ್ಲಿ ವೇತನ ಸಂಹಿತ ರಜೆಯನ್ನು ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಯಲ್ಲಿರುವ ಸರ್ಕಾರಿ ನೌಕರಕರಿಗೆ ಅನ್ವಯವಾಗುವುದಿಲ್ಲಾ.
ಆದರೂ ಸಹ ತುರ್ತು ಸೇವೆಯಲ್ಲಿರುವ ಸರ್ಕಾರಿ ನೌಕರಕರಿಗೆ ಚುನಾವಣೆಯಲ್ಲಿ ಮತ ಚಲಾಯಿಸಲು ಯಾವುದೇ ರೀತಿಯ ತೊಂದರೆ ಯಾಗದಂತೆ ಮತಚಲಾಯಿಸಲು ಅನುಕೂಲ ಮಾಡಿಕೊಡಲು ಸರ್ಕಾರ ಸೂಚಿಸಿದೆ. ಅಲ್ಲದೇ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲಾದ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಲು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
(State Government announces paid leave for government employees on October 30)