Good News : ಅರ್ಚಕರಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ಆರೋಗ್ಯ ವಿಮೆ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಕುರಿತು ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಜುರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಮೂಲಕ ಅರ್ಚಕರು, ದೇವಾಲಯದ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ಕುರಿತಂತೆ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ಆರೋಗ್ಯ ವಿಮೆ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಕುರಿತು ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ.

ಇದನ್ನೂ ಓದಿ: HDFC BANK : ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಭರ್ಜರಿ ಗುಡ್‌ ನ್ಯೂಸ್

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇ ವೇತನ ಆಯೋಗದ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6 ನೇ ವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅನೇಕ ಶಾಸಕರಿಂದ ಹಲವಾರು ಬಾರಿ ಒತ್ತಡ ಬಂದಿರುವುದರಿಂದ ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ 35% ರಷ್ಟು ಮೀರದಂತೆ ನೌಕರರನ್ನು 6 ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದರು.

ಇದನ್ನೂ ಓದಿ: ಗ್ರಾಹಕರಿಗೆ ಮತ್ತೆ ಶಾಕ್‌ ಕೊಟ್ಟ ಗ್ಯಾಸ್‌ ದರ : 15 ದಿನದಲ್ಲಿ 50 ರೂಪಾಯಿ ಹೆಚ್ಚಳ

(The state government that gave good news to priests)

Comments are closed.