ಬೆಂಗಳೂರು : ಭಾರತ ದೇಶದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಇಲ್ಲದಿದ್ದರೆ ಭಾರತ ಮೂರ್ನಾಲ್ಕು ಪಾಕಿಸ್ಥಾನ ಆಗುತ್ತಿತ್ತು ಎಂದು ಹೇಳುವ ಮೂಲಕ ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಆರ್ ಎಸ್‌ಎಸ್ ಇಲ್ಲದಿದ್ದರೆ ಭಾರತ ಈ ವೇಳೆಗೆ ಮೂರ್ನಾಲ್ಕು ಪಾಕಿಸ್ತಾನ ಆಗುತ್ತಿತ್ತು. ಆರ್ ಎಸ್‌ಎಸ್ ಬಗ್ಗೆ ಇಲ್ಲಸಲ್ಲದ ಟೀಕೆ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಇಬ್ಬರೂ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದುಕೊಳುತ್ತಿದ್ದಾರೆ ಎಂದು ಚಾಟಿ ಬೀಸಿದ್ದಾರೆ.
ಇದನ್ನೂ ಓದಿ: IT RAID : ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಟೀಕಿಸಿದರೆ ಮುಸ್ಲಿಂ ಮತದಾರರು ತಮ್ಮ ಪರವಾಗುತ್ತಾರೆಂಬ ಭ್ರಮೆಯಲ್ಲಿದ್ದಾರೆ. ಮುಸ್ಲಿಮರಿಗೂ ಇವರ ಬಂಡವಾಳ ಗೊತ್ತಾಗಿದೆ, ಹಲವು ಮುಸ್ಲಿಂ ಮುಖಂಡರು ಅನೇಕರು ಬಿಜೆಪಿ ಸೇರಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸುಳ್ಯ ಕೋರ್ಟ್‌ಗೆ ಡಿ.ಕೆ.ಶಿವಕುಮಾರ್ ಹಾಜರ್ : ಕಲಾಪದ ವೇಳೆ ಹೊಯ್ತು ಕರೆಂಟ್ !
(Without rss india will divided into 3 to 4 paksithan’s)