TEACHER POST RECRUITMENT: 15,000 ಶಿಕ್ಷಕರ ನೇಮಕಾತಿ ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬೆಂಗಳೂರು: TEACHER POST RECRUITMENT ಇತ್ತೀಚೆಗಷ್ಟೇ ಪ್ರಕಟಿಸಲಾಗಿದ್ದ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ತಡೆಯಾಜ್ಞೆಯಿಂದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನಷ್ಟು ವಿಳಂಭವಾಗುವ ಸಾಧ್ಯತೆ ಇದೆ.  

ಕರ್ನಾಟಕದ ವಿವಿಧ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗಾಗಿ ಸರ್ಕರ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಆಯ್ಕೆಯಲ್ಲಿ ಕೆಲಗೊಂದಲಗಳು ಇರುವುದರಿಂದ ಕೆಲ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಶನಿವಾರ ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಮುಂದಿನ ಆದೇಶದವರೆಗೆ ಆಯ್ಕೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ತಡೆ ನೀಡಿದೆ. ನವೆಂಬರ್ 18 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿತ್ತು ಹೀಗಾಗಿ ನವೆಂಬರ್ 18 ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ನಂತರದ ಪ್ರಕ್ರಿಯೆಯನ್ನ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಆಯ್ಕೆ ಪಟ್ಟಿಯಲ್ಲಿ ಮೀಸಲಾತಿ ಸಂಬಂಧ ಗೊಂದಲಗಳಿದ್ವು, ಹಲವು ಅಭ್ಯರ್ಥಿಗಳು ಒಬಿಸಿ ಮೀಸಲಾತಿಯಲ್ಲಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇನ್ನು ಅಧಿಸೂಚನೆಯಲ್ಲಿ ಸ್ಪಷ್ಟ ಉಲ್ಲೇಖವಿರದ ಕಾರಣ ಸುಮಾರು ಎರಡು ಸಾವಿರಕ್ಕೂ ವಿವಾಹಿತ ಮಹಿಳಾ ಅಭ್ಯರ್ಥಿಗಳು ಉದ್ಯೋಗ ವಂಚಿತರಾಗಿದ್ದಾರೆ. ಮದುವೆಯಾದರೂ ತಂದೆಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಿರುವುದಕ್ಕಾಗಿ ಉದ್ಯೋಗದಿಂದ ವಂಚಿತರಾಗಿದ್ದಾರೆ. ಹೀಗಾಗಿ ಅಂತಹ ಅಭ್ಯರ್ಥಿಗಳೂ ಸಹ ಹೋರಾಟಕ್ಕೆ ಇಳಿದಿದ್ದಾರೆ.

ಒಟ್ಟು 15000 ಪಧವೀದರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. 10 ತೃತೀಯ ಲಿಂಗಿಗಳ ಪೈಕಿ, 3 ತೃತೀಯ ಲಿಂಗಿಗಳು ಆಯ್ಕೆಯಾಗಿರುವುದು ವಿಶೇಷವಾಗಿತ್ತು ಇನ್ನು 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದರು.

ಶಿಕ್ಷಣ ಇಲಾಖೆಯು 2022ರ ಮಾರ್ಚ್‌/ ಏಪ್ರಿಲ್ ತಿಂಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ಸಹ ನಡೆಸಿತ್ತು. ಪತ್ರಿಕೆ ಒಂದಕ್ಕೆ 68,873 ಅಭ್ಯರ್ಥಿಗಳು ಮತ್ತು ಪತ್ರಿಕೆ 2ಕ್ಕೆ 10,571 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು.

ಇದನ್ನೂ ಓದಿ :GUJARAT ELECTION:  ಗುಜರಾತ್ ವಿಧಾನಸಭೆ ಚುನಾವಣೆ ಇಂದು.. 89 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಇದನ್ನೂ ಓದಿ : Rishab Shetty Photoshoot: ‘ಹ್ಯಾಷ್ ಟ್ಯಾಗ್’ ಮ್ಯಾಗಜಿನ್ ಮುಖಪುಟದಲ್ಲಿ ರಿಷಬ್ ಶೆಟ್ಟಿ; ಫೋಟೋಶೂಟ್ ನಲ್ಲಿ ಮಿಂಚಿದ್ದು ಹೀಗೆ..

TEACHER POST RECRUITMENT 15,000 teachers recruitment provisional selection list process stayed by High Court

Comments are closed.