ಕಾರ್ಕಳದಲ್ಲಿ ಕಾರು ಬಸ್ ಭೀಕರ ಅಪಘಾತ : ಮಗು ಸೇರಿ ಮೂವರು ಸಾವು

ಕಾರ್ಕಳ : Karkala car bus accident : ಖಾಸಗಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ವೇಣೂರು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ಹೆದ್ದಾರಿಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ.

ನಾಗರಾಜ್‌, ಪ್ರತ್ಯುಷಾ ಹಾಗೂ ಎರಡು ವರ್ಷದ ಮಗು ಸಾವನ್ನಪ್ಪಿದ ದುರ್ದೈವಿಗಳು. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಗಂಡ, ಹೆಂಡತಿ ಹಾಗೂ ಮಗು ಸಾವನ್ನಪ್ಪಿದೆ. ಧರ್ಮಸ್ಥಳದಲ್ಲಿ ಮಂಜುನಾಥ ದೇವರ ದರ್ಶನ ಪಡೆದು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಶೃಂಗೇರಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Terrible car bus accident in Karkala Three dead including a child

ಮದುವೆ ಮನೆಯಲ್ಲಿ ಸಿಲಿಂಡರ್‌ ಸ್ಫೋಟ: ನಾಲ್ಕು ಮಂದಿ ಸಾವು, 60 ಮಂದಿ ಗಾಯ

ಜೋಧ್‌ಪುರ: ಮದುವೆ ಸಮಾರಂಭವೊಂದರಲ್ಲಿ ಗ್ಯಾಸ್ ಸಿಲಿಂಡರ್‌ಗಳು ಏಕಾಏಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿರುವ ದುರ್ಘಟನೆ ಜೋಧ್‌ಪುರದ ಭುಂಗ್ರಾ ಗ್ರಾಮದ ಶೇರ್‌ಗಢ್ ಪ್ರದೇಶದಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು 60 ಮಂದಿ ಗಾಯಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜೋಧ್‌ಪುರದ ಶೇರ್‌ಗಢ್‌ನ ಭುಂಗ್ರಾ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಕ್ಷ್ಯಗಳನ್ನು ತಯಾರಿಸುತ್ತಿದ್ದ ವೇಳೆ ಅಡುಗೆ ಮನೆಯಲ್ಲಿ ಮೊದಲಿಗೆ ಸಿಹಿ ತಿನಿಸುಗಳನ್ನು ತಯಾರಿಸುತ್ತಿದ್ದ ಸ್ಟವ್ ಬಳಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ(Gas Cylinder Blast) ಗೊಂಡಿದೆ. ಇದರ ಹಿಂದೆಯೇ ಸಮೀಪದಲ್ಲಿ ಇರಿಸಲಾಗಿದ್ದ 5 ಸಿಲಿಂಡರ್‌ಗಳು ಒಂದೊಂದಾಗಿ ಸ್ಫೋಟಗೊಂಡಿವೆ. ಸ್ಫೋಟದಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕ್ಷಣ ಮಾತ್ರದಲ್ಲಿ ಮದುವೆ ಮಂಟಪ ಬೆಂಕಿಯ ಕೆನ್ನಾಲಿಗೆ ಹರಡಿದ್ದು, ಈ ವೇಳೆ ಬೆಂಕಿಗಾಹುತಿಯಾದ ಜನರ ಕಿರುಚಾಟ ಕೇಳಿದ ಗ್ರಾಮಸ್ಥರು ಅಲ್ಲಿದ್ದ ಜನರನ್ನು ರಕ್ಷಿಸಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮತ್ತು ಗ್ರಾಮಾಂತರ ಎಸ್ಪಿ ಅನಿಲ್ ಕಯಾಲ್, ಗಾಯಾಳುಗಳನ್ನು ಜೋಧ್‌ಪುರದ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಗಳ ಪ್ರಕಾರ, ಮದುವೆ ಸಮಾರಂಭದಲ್ಲಿ ಅಡುಗೆಗಾಗಿ 20 ಗ್ಯಾಸ್ ಸಿಲಿಂಡರ್‌ಗಳನ್ನು ಆರ್ಡರ್ ಮಾಡಲಾಗಿತ್ತು. ಅವುಗಳಲ್ಲಿ ಒಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿದ ಪರಿಣಾಮ ಒಂದರ ಹಿಂದೆ ಒಂದರಂತೆ ಐದು ಸಿಲಿಂಡರ್‌ಗಳು ಒಟ್ಟಿಗೆ ಸ್ಪೋಟಗೊಂಡಿವೆ.

ಈ ದುರ್ಘಟನೆಯಲ್ಲಿ ವರ ಸುರೇಂದ್ರ ಸಿಂಗ್, ವರನ ತಂದೆ ತಗತ್ ಸಿಂಗ್, ವರನ ತಾಯಿ ದಖು ಕವಾರ್ ಮತ್ತು ಸಹೋದರಿ ರಸಲ್ ಕನ್ವರ್ ಜುಲ್ಸ್ ಸೇರಿದಂತೆ ಸುಮಾರು 60 ಜನರು ಸುಟ್ಟುಕರಕಲಾಗಿದ್ದು ಎಲ್ಲರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : Brahmavara Road accident: ಟೂರಿಸ್ಟ್‌ ಬಸ್‌ ಚಾಲಕನ ಅಜಾಗರೂಕತೆಗೆ ಓರ್ವ ಬಲಿ

ಇದನ್ನೂ ಓದಿ : video viral: ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಟಿಸಿ ಮೇಲೆ ಬಿದ್ದ ಹೈಟೆನ್ಶನ್ ವಯರ್

Terrible car bus accident in Karkala Three dead including a child

Comments are closed.