ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲೀಗ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ರಾಜ್ಯ ಸರಕಾರ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ್ದು, ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದಲೂ ಕಟ್ಟುನಿಟ್ಟಿನ ಆದೇಶ ಜಾರಿಯಲ್ಲಿದೆ. ಖಾಸಗಿ ಸೇರಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ನಿಷೇಧ ಹೇರಲಾಗಿದೆ. ಹೀಗಾಗಿಯೇ ಸರಕಾರ ವಾಹನ ಸವಾರರಿಗೆ ತೆರಿಗೆ ಪಾವತಿಯಿಂದ ವಿನಾಯಿತಿಯನ್ನು ನೀಡಿದೆ.
ಕರ್ನಾಟಕದ ರಾಜ್ಯದಲ್ಲಿ ನೋಂಣಿಯಾಗಿರುವ ಎಲ್ಲಾ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಾಹನ ಸವಾರರಿಗೆ ಸರಕಾರದ ಆದೇಶ ಕೊಂಚ ಮಟ್ಟಿಗೆ ನೆಮ್ಮದಿಯನ್ನು ನೀಡಲಿದೆ.