Todays Weather: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Todays Weather) ಕರಾವಳಿ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ದಿನವಿಡಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ವ್ಯಾಪಕ ಮಳೆ(Todays Weather)ಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಕೆಲವು ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದ್ದು, ಕೆಲವು ಕಡೆ ತುಂತುರು ಮಳೆ ಸುರಿಯುತ್ತಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಮಲೆನಾಡಿನ ಕೆಲವು ಭಾಗಗಳು ಹಾಗೂ ಕೆಲವು ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ದಾವಣಗೆರೆ, ತುಮಕೂರು ಹಾಗೂ ಉತ್ತರಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯೆತೆಯಿದೆ. ವಾಯುಭಾರ ಕುಸಿತದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ಸಾಧ್ಯತೆಗಳು ಇವೆ.

ಇದನ್ನೂ ಓದಿ : Daughter Murdered By Father : ಸಾಲದ ಹೊರೆ ತಪ್ಪಿಸಲು ತನ್ನ 2 ವರ್ಷದ ಮಗಳನ್ನೇ ಕೊಲೆಗೈದ ಬೆಂಗಳೂರಿನ ಇಂಜಿನಿಯರ್

ಇದನ್ನೂ ಓದಿ : Voter ID scam: ಬಿಬಿಎಂಪಿ ಅಧಿಕಾರಿಗಳು ಲಂಚ ಪಡೆದಿರುವ ಆರೋಪ: ಅಧಿಕಾರಿಗಳ ಅಮಾನತು

ಇಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದ್ದು, ಕರ್ನಾಟಕ ಹಾಗೇ ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳದ ಪ್ರದೇಶಗಳಲ್ಲಿ ಮಿಂಚು ಸಹಿತ ಮಳೆಯಾಗಲಿದ್ದು, ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ ಪ್ರದೇಶಗಳಲ್ಲಿ ಕೂಡ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Todays Weather) It has been raining in coastal Karnataka for the past few days and it will rain extensively today. It has been raining in Bengaluru for the past one week and it will be cloudy today too. Moderate rain is expected in many districts of the state today.

Comments are closed.