ತುಮಕೂರು (Tumkur ) : ಬೀಗರೂಟ ಮಾಡಿದ್ದ ನಂತರ ವಾಂತಿ, ಬೇಧಿ ಕಾಣಿಸಿಕೊಂಡು ಸುಮಾರು 24 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತುಮಕೂರು ಜಿಲ್ಲೆಯ ಪಾವಗಡದ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿದೆ. ಅಲ್ಲದೇ ಅಗಸ್ಟ್ 16 ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರೂಟ ನಡೆದಿತ್ತು. ಬೀಗರು ಊಟ ಮಾಡಿ ಮನೆಗೆ ತೆರಳಿದ ವೇಳೆಯಲ್ಲಿ ಹಲವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡವರನ್ನು ಪಾವಗಡ, ಬೆಂಗಳೂರು, ಹಿಂದೂಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೀಗರೂಟ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ನಾಗೇನಹಳ್ಳಿ ತಾಂಡಾಕ್ಕೆ ಎಸಿ, ತಹಶೀಲ್ದಾರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ನೀರಿನ ಸ್ಯಾಂಪಲ್‌ಗಳನ್ನು ಪಡೆದುಕೊಂಡಿದ್ದು, ಆದರೆ ಊಟ ಅಥವಾ ಕುಡಿದಿರುವ ನೀರಿನಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಊಟಕ್ಕೂ ಮೊದಲೇ ಬೀಗರೂಟಕ್ಕೆ ಬಂದಿರುವವರು ಕಳ್ಳಬಟ್ಟಿ ಸೇವನೆ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ಬೈಂದೂರು : ಮೆಹಂದಿ ಶಾಸ್ತ್ರದ ವೇಳೆ ಮದುಮಗ ಎಸ್ಕೇಪ್, ಮದುವೆಯೇ ರದ್ದು !
Tumkur 24 people fell sick eating baaduta Kannada News