ಸೋಮವಾರ, ಜೂನ್ 16, 2025
Homeeducationಜೂನ್‌ 16 ಉಡುಪಿ, ದ.ಕ ಶಾಲೆಗಳಿಗೆ ರಜೆ : ಬಾರೀ ಮಳೆ 3 ದಿನ ರೆಡ್‌...

ಜೂನ್‌ 16 ಉಡುಪಿ, ದ.ಕ ಶಾಲೆಗಳಿಗೆ ರಜೆ : ಬಾರೀ ಮಳೆ 3 ದಿನ ರೆಡ್‌ ಅಲರ್ಟ್‌

Heavy Rainfall Red Alert : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮೂಲ್ಕಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಳ್ಳೈ ಮುಗಿಲನ್‌ ಅವರು ಆದೇಶ ಹೊರಡಿಸಿದ್ದಾರೆ.

- Advertisement -

School Holiday : ಮಂಗಳೂರು / ಉಡುಪಿ : ಕಳೆದ ಕೆಲವು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಬಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜೂನ್‌ 16 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿನ ಅಂಗನಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜೂನ್‌ 15, 16ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಕಾಲೇಜು, ಪದವಿಪೂರ್ವ ಕಾಲೇಜು, ಐಟಿಐ, ಇಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

Also Read : ಗೃಹಜ್ಯೋತಿ ಗ್ರಾಹಕರಿಗೆ ಸರಕಾರದ ವಂಚನೆ : ಮೆಸ್ಕಾಂ ಉದ್ಯೋಗಿಗಳ ಪಿಎಫ್‌ + ಗ್ರಾಚ್ಯುಟಿಗೆ ಗ್ರಾಹಕರ ಹಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದೆ. ಮಂಗಳೂರು ನಗರ ಬಾರೀ ಮಳೆಗೆ ತತ್ತರಿಸಿ ಹೋಗಿದೆ. ನಗರ ಬಹುತೇಕ ಪ್ರದೇಶಗಳಿಗೆ ನೀರು ನುಗ್ಗಿದೆ. ಜನರು ಮಳೆಯಿಂದಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂನ್‌ 16 ರಂದು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಜಿಲ್ಲಾಡಳಿತ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಅತೀ ಹೆಚ್ಚು ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮೂಲ್ಕಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಳ್ಳೈ ಮುಗಿಲನ್‌ ಅವರು ಆದೇಶ ಹೊರಡಿಸಿದ್ದಾರೆ.

Also Read : Ahmedabad plane crash Live : ಅಹಮದಾಬಾದ್‌ ವಿಮಾನ ದುರಂತ- ಪತ್ತೆಯಾಯ್ತು ಬ್ಲ್ಯಾಕ್‌ ಬಾಕ್ಸ್‌ ಬಯಲಾಗುತ್ತಾ ರಹಸ್ಯ ?

ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಡಳಿತ ರಜೆಯನ್ನು ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

Udupi and Dakshina Kannada mangalore Heavy Rain Red Alert School Holiday in June 16

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular