Udupi Assembly Election : ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ

ಉಡುಪಿ: (Udupi Assembly Election)ಕರಾವಳಿಯಲ್ಲೀಗ ವಿಧಾನಸಭಾ ಚುನಾವಣೆಯ ಕಾವು ಹೆಚ್ಚುತ್ತಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬೃಹತ್‌ ಪಾದಯಾತ್ರೆ ನಡೆಯಲಿದೆ.

ಎಪ್ರಿಲ್‌ 24ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕಾಂಗ್ರೆಸ್‌ ನಿಂದ ಮತದಾರರಿಗೆ ಜಾಗೃತಿ ಮೂಡಿಸಲು ಮಧ್ಯಾಹ್ನ ಉಡುಪಿ ನಗರದದ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿಯ ಸಿಟಿಬಸ್‌ ನಿಲ್ದಾಣದ ಬಳಿಯಿರುವ ನರ್ಮ್ ಬಸ್‌ ನಿಲ್ದಾಣದಿಂದ ಪ್ರಾರಂಭಗೊಂಡು ಸರ್ವಿಸ್‌ ಬಸ್‌ ನಿಲ್ದಾಣದ ಮೂಲಕ ಸಾಗಿ ಕೆ.ಎಂ. ಮಾರ್ಗವಾಗಿ, ಕೋರ್ಟ್‌ ರಸ್ತೆ, ಜೋಡುಕಟ್ಟೆ ಮೂಲಕ ತೆರಳಿ ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಸಮಾಪನಗೊಳ್ಳಲಿದೆ.

ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಪಾಲ್ಗೊಳ್ಳಲಿದ್ದಾರೆ.‌ ಪಾದಯಾತ್ರೆ ನಡೆದ ಬಳಿಕ ಡಿ.ಕೆ.ಶಿವಕುಮಾರ್‌ ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಕಾಂಗ್ರೆಸ್‌ ಕಾರ್ಯಕರ್ತ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸದ್ಯ ಉಡುಪಿ ಜಿಲ್ಲೆಯ (Udupi Assembly Election) ಐದು ವಿಧಾನಸಭಾ ಕ್ಷೇತ್ರ ಬಿಜೆಪಿಯ ವಶದಲ್ಲಿದೆ. ಶತಾಯಗತಾಯ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕು ಅನ್ನೋ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಬೈಂದೂರಿಗೆ ಆಗಮಿಸಿದ್ದ ಡಿಕೆಶಿ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಹಲವು ಬಿಜೆಪಿ ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಆದರೆ ಇನ್ನೊಂದೆಡೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ನಾಯಕರ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣಿಸುತ್ತಿದೆ. ಕಾಂಗ್ರೆಸ್‌ ನಾಯಕರ ನಡುವಿನ ವೈಮನಸ್ಸು ಶಮನಕ್ಕಾಗಿ ಡಿ.ಕೆ.ಶಿವಕುಮಾರ್‌ ಉಡುಪಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ : ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್‌ ಗಾಂಧಿ : ಸರಕಾರದ ಬಂಗಲೆ ಕೀಲಿ ಕೈ ವಾಪಾಸ್ ಮಾಡಿದ ಕಾಂಗ್ರೆಸ್ ಮುಖಂಡ

ಇದನ್ನೂ ಓದಿ : ಮುಖ್ಯಮಂತ್ರಿ ಆದ್ರೆ ಮತ್ತೆ ಟಿಪ್ಪು ಜಯಂತಿ ಆಚರಿಸ್ತೀರಾ ? ಅಚ್ಚರಿಯ ಉತ್ತರ ಕೊಟ್ರಾ ಸಿದ್ದರಾಮಯ್ಯ

ಇದನ್ನೂ ಓದಿ : ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿ.ಕೆ.ಸುರೇಶ್ ನಾಮಪತ್ರ ತಿರಸ್ಕೃತ

Comments are closed.