ಉಡುಪಿ : ಉಡುಪಿ (Udupi) ನಗರದಲ್ಲಿರುವ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ (sharada residential school) ಬಾಂಬ್ ಬೆದರಿಕೆ (Udupi Bomb Threat) ಬಂದಿದೆ. ಈ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬೆನ್ನಲ್ಲೇ ಶಾಲೆಯ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಶಾಲೆಗಳಿಗೆ ದುಷ್ಕರ್ಮಿಗಳಿಂದ ಬಾಂಬ್ ಬೆದರಿಕೆ ಕರೆಗಳು ಬರುತ್ತಿವೆ. ಇದರ ಸಾಲಿಗೆ ಇದೀಗ ಉಡುಪಿಯೂ ಸೇರ್ಪಡೆಗೊಂಡಿದೆ. ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಶಾರದಾ ರೆಸಿಡೆನ್ಶಿಯಲ್ ಸ್ಕೂಲ್‌ಗೆ ಈ ಮೇಲ್ ಮೂಲಕ ರವಾನೆ ಆಗಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನದಳವನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಹಿಳೆಯರಿಗೆ ಗುಡ್‌ನ್ಯೂಸ್ : ಕೇಂದ್ರ ಸರಕಾರ ನೀಡಲಿದೆ 6 ಯೋಜನೆಯಡಿ ಸಾಲ

ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದಂತೆಯೇ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಉಡುಪಿ ನಗರದಲ್ಲಿ ಸದ್ಯ ಬಿಗುವಿನ ವಾತಾರಣ ಸೃಷ್ಟಿಯಾಗಿದ್ದು, ಪೊಲೀಸ್ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಶಾಲೆಯ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆಯುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಾಲೆಯ ಮೂಲೆ ಮೂಲೆಯಲ್ಲಿಯೂ ಪರಿಶೀಲನೆ ನಡೆಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ : ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿಶೇಷ ಚೇತನ ವಿದ್ಯಾರ್ಥಿ ಶಶಿಕಾಂತ ಹಿರೇಮಠ್
Udupi Bomb Threat to Sharada Residential School Udupi Police check