ಸರಕಾರದ ಮಾರ್ಗಸೂಚಿಗೂ ಕ್ಯಾರೇ ಅನ್ನದ ಶಿಕ್ಷಣ ಸಂಸ್ಥೆಗಳು : ಕಣ್ಮುಚ್ಚಿ ಕುಳಿತ ದ.ಕ., ಉಡುಪಿ ಜಿಲ್ಲಾಡಳಿತ

ಮಂಗಳೂರು / ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರಾಜ್ಯದಾದ್ಯಂತ ಶಾಲೆ, ಕಾಲೇಜುಗಳನ್ನು ಬಂದ್ ಮಾಡುವಂತೆ ರಾಜ್ಯ ಸರಕಾರ ಆದೇಶಿಸಿದೆ. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಶಿಕ್ಷಣ ಸಂಸ್ಥೆಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ.

ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಇಂದಿನಿಂದ ಜಾರಿಗೆ ಬಂದಿದೆ. ಮಾರ್ಗಸೂಚಿಯ ಪ್ರಕಾರ ಶಾಲೆ, ಕಾಲೇಜು ಹಾಗೂ ತರಬೇತಿ ಕೇಂದ್ರಗಳನ್ನು ನಡೆಸದಂತೆಯೂ ಕಟ್ಟಪ್ಪಣೆಯನ್ನು ಹೊರಡಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿನ ಬಹುತೇಕ ಶಾಲೆ, ಕಾಲೇಜುಗಳು ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿವೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಾಲೇಜುಗಳು ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿವೆ. ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ಪಾಠ ಬೋಧನೆಯನ್ನು ಮಾಡಲಾಗುತ್ತಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿಯೂ ಕೆಲ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯಾರ್ಥಿಗಳನ್ನು ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆಯಿಸಿ ಪಾಠ ಬೋಧನೆಯನ್ನು ಮಾಡುತ್ತಿರೋದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಶಿಕ್ಷಕರಿಗೆ ರಜೆ ಘೋಷಣೆ ಮಾಡಿದ್ದರೂ ಕೂಡ ಶಿಕ್ಷಕರುಗಳು ಕೂಡ ಶಾಲೆಗೆ ಹಾಜರಾಗಿದ್ದಾರೆ.

ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳನ್ನು ಕೆಳಗಿಸುವುದು, ಮಾಸ್ಕ್ ಧರಿಸದ ಜನಸಾಮಾನ್ಯ ರನ್ನು ಬಂಧಿಸುವ ಜಿಲ್ಲಾಡಳಿತ ಇದೀಗ ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ಮೃದುಧೋರಣೆಯನ್ನು ತೋರುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮೆದುರಲ್ಲೇ ಸರಕಾರದ ಆದೇಶ ಉಲ್ಲಂಘನೆಯಾಗುತ್ತಿದ್ರೂ ಮೌನವಾಗಿದ್ದಾರೆ. ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತಗಳು ಮಾತ್ರ ಕಣ್ಮುಚ್ಚಿ ಕುಳಿತಿರೋದು ದುರಂತವೇ ಸರಿ.

Comments are closed.