ಉಡುಪಿ ಜಿಲ್ಲೆಯ ಪ್ರೌಢ, ಪ್ರಾಥಮಿಕ ಶಾಲೆ, PUCಗೆ ರಜೆ ಘೋಷಣೆ : ಜೂನ್‌ 17ರಂದು ರೆಡ್‌ ಅಲರ್ಟ್‌

Udupi School Holiday : ಉಡುಪಿ : ಕಳೆದ ಕೆಲವು ದಿನಗಳಿಂದಲೂ ಬಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜೂನ್‌ 17ರಂದು ಉಡುಪಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಐಟಿಐಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆಯ ರೆಡ್‌ ಅಲರ್ಟ್‌ ಮುನ್ಸೂಚನೆಯನ್ನು ನೀಡಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಐಟಿಐಗಳಿಗೆ ರಜೆ ಘೋಷಣೆ (Udupi School Holiday) ಮಾಡಲಾಗಿದೆ. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ -3 ಎಂದಿನಂತೆಯೇ ನಡೆಯಲಿದೆ. ಇನ್ನು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ತರಗತಿಗಳು ಎಂದಿನಂತೆಯೇ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also Read : 5000 ಕಿ.ಮೀ ವೇಗ, ಭೂಮಿ ಸುತ್ತಲು ಕೇವಲ 7 ಗಂಟೆ ! ಏನಿದು ಹೈಪರ್‌ಸಾನಿಕ್ ವಿಮಾನ

ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಅಲ್ಲದೇ ಜೂನ್‌ 17ರಂದು ಕೂಡ ಮಳೆಯ ಆರ್ಭಟ ಮುಂದುವರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ತುಂಬಿದ್ದು, ಜಿಲ್ಲೆಯ ಜೀವ ನದಿಗಳು ಉಕ್ಕಿ ಹರಿಯುತ್ತಿವೆ.

Also Read : Ration Card ekyc : ಜೂನ್‌ 30 ಕೊನೆಯ ದಿನ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್‌ ಕಾರ್ಡ್‌

ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ನಿಂತರವಾಗಿ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಮಲೆನಾಡು, ಕರಾವಳಿ ಭಾಗ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಕೂಡ ರಜೆ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದೆ. ಜಿಲ್ಲೆಯ ಮಂಗಳೂರು ನಗರ ವ್ಯಾಪ್ತಿಯಲ್ಲಿ ಬಾರೀ ಮಳೆ ಸುರಿದಿದ್ದು, ಬಹುತೇಕ ಮನಗಳಿಗೆ ನೀರು ನುಗ್ಗಿದೆ. ಪಂಪ್‌ ವೆಲ್‌, ಕೊಟ್ಟಾರ ಚೌಕಿ, ಬೈಕಂಪಾಡಿ ಪ್ರದೇಶಗಳಲ್ಲಿ ಮಳೆಯಿಂದಾಗಿ ಕೃತಕ ನೆರೆ ಹಾವಳಿ ಉಂಟಾಗಿದ್ರೆ, ನಗರ ಬಹುತೇಕ ಕಡೆಗಳಲ್ಲಿನ ಜನರು ಮಳೆಗೆ ತತ್ತರಿಸಿದ್ದಾರೆ.

Udupi dc Announced School Holiday for high school, primary school, PUC June 17th red alert declared in kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories