ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ, ಜುಲೈ 5 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Udupi Heavy Rain School Holiday ಉಡುಪಿ : ಕಳೆದ ಎರಡು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಬೈಂದೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕುಂದಾಪುರ ಎಸಿ ರಶ್ಮಿ ಎಸ್‌. ಆರ್‌ ಅವರು ಆದೇಶ ಹೊರಡಿಸಿದ್ದಾರೆ.

Udupi Heavy Rain School Holiday ಉಡುಪಿ : ಕಳೆದ ಎರಡು ದಿನಗಳಿಂದಲೂ ಧಾರಾಕಾರ ಮಳೆ (Heavy Rain)  ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ (Udupi)  ಜಿಲ್ಲೆಯ ಕುಂದಾಪುರ (Kundapura), ಬ್ರಹ್ಮಾವರ (Brahmavar), ಬೈಂದೂರು (Byndoor) ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ( School and College Holiday) ಘೋಷಣೆ ಮಾಡಿ ಕುಂದಾಪುರ ಎಸಿ ರಶ್ಮಿ ಎಸ್‌. ಆರ್‌ ಅವರು ಆದೇಶ ಹೊರಡಿಸಿದ್ದಾರೆ.

Udupi Heavy Rain July 5th Announced School Holiday Declared
Image Credit to Original Source

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಳೆದ ಕೆಲವು ದಿನಗಳಿಂದಲೂ ಬಾರೀ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಜುಲೈ 5 ರಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದಿರುವ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ : 5,8.9ನೇ ತರಗತಿಗೆ ಬೋರ್ಡ್‌ ಪರೀಕ್ಷೆ ರದ್ದು : ಆದ್ರೆ ಶಿಕ್ಷಣ ಇಲಾಖೆಯಿಂದ ಹೊಸ ರೂಲ್ಸ್‌ ಜಾರಿ

ಆದರೆ ಜಿಲ್ಲೆಯಾದ್ಯಂತ ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್‌ ಐಟಿಐ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಅಲ್ಲದೇ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಕಾಲೇಝುಗಳ ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವಾಗ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪಿಸುವ ಕಾರ್ಯವನ್ನು ಮಾಡಬೇಕು.

Udupi Heavy Rain July 5th Announced School Holiday Declared
Image Credit to Original Source

ಹಳ್ಳ, ತೋಡುಗಳನ್ನು ದಾಟಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಸುರಕ್ಷತೆಯ ದೃಷ್ಠಿಯಿಂದ ಮನೆಯಲ್ಲಿಯೇ ಇರುವಂತೆ ಸೂಚನೆಯನ್ನು ನೀಡಬೇಕು. ಮಳೆಯ ಹಿನ್ನೆಲೆಯಲ್ಲಿ ನೀಡಿರುವ ರಜೆಯನ್ನು ಶನಿವಾರ ಅಐವಾ ಭಾನುವಾರದಂದು ಹೆಚ್ಚುವರಿ ತರಗತಿಗಳನ್ನು ನಡೆಸಿ, ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ

ಕಳೆದ ಕೆಲವು ದಿನಗಳಿಂದಲೂ ಉಡುಪಿ ಜಿಲ್ಲೆಯ ಕುಂದಾಫುರ, ಬೈಂದೂರು, ಬ್ರಹ್ಮಾವರ, ಉಡುಪಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಅದ್ರಲ್ಲೂ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕಿನ ಬಹುತೇಕ ಕಡೆಗಳಲ್ಲಿನ ನದಿಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ಹಾವಳಿ ಉಂಟಾಗಿದೆ.

ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ

Udupi Heavy Rain July 5th Announced School Holiday Declared

Comments are closed.