ಬ್ರಹ್ಮಾವರ : ಈಜಲು ತೆರಳಿದ್ದ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ನದಿಯಲ್ಲಿ ನಡೆದಿದೆ. ಇಂದು ಇಬ್ಬರೂ ಬಾಲಕರ ಮೃತ ದೇಹ ಪತ್ತೆಯಾಗಿದೆ.
ಅನಾಸ್ (16 ವರ್ಷ) ಹಾಗೂ ಶ್ರೇಯಸ್ (18ವರ್ಷ ) ಎಂಬವರೇ ಮೃತ ಬಾಲಕರು ಎಂದು ತಿಳಿದು ಬಂದಿದೆ. ನದಿಯಲ್ಲಿ ಒಟ್ಟು ಮೂವರು ಬಾಲಕರು ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಮತ್ತೊಬ್ಬ ಬಾಲಕ ಪಾರಾಗಿದ್ದಾನೆ. ಆದರೆ ಸ್ನೇಹಿತರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರೂ ಕೂಡ ಪಾರಾದ ಬಾಲಕ ಮನೆಯವರಿಗೆ ಸುದ್ದಿಯನ್ನು ತಿಳಿಸಿರಲಿಲ್ಲ.
ಸಂಜೆಯಾದರೂ ಬಾಲಕರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸರು ವಿಚಾರಣೆ ನಡೆಸಿದ ವೇಳೆಯಲ್ಲಿ ಬಾಲಕರು ನೀರು ಪಾಲಾಗಿರುವ ವಿಚಾರ ತಿಳಿದು ಬಂದಿದೆ. ಕೂಡಲೇ ಸ್ವರ್ಣಾ ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದು, ಈಜು ಪಟು ಈಶ್ವರ್ ಅವರನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಆದರೆ ನಿನ್ನೆ ರಾತ್ರಿ ಮೃತ ದೇಹ ಪತ್ತೆಯಾಗಿರಲಿಲ್ಲ. ಆದ್ರಿಂದು ಮುಂಜಾನೆ ಮೃತ ದೇಹ ಪತ್ತೆಯಾಗಿದೆ.
ಕಳೆದ ಕೆಲವು ದಿನಗಳಿಂದಲೂ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯಲ್ಲಿ ನೀರಿನ ಒಳ ಸೆಳೆತಕ್ಕೆ ಸಿಲುಕಿ ಬಾಲಕರು ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಬಾಲಕರ ಸಾವಿನ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಕ್ಕಳಿಗೆ ಜ್ಯೂಸ್‌ನಲ್ಲಿ ವಿಷ ಬೆರೆಸಿ, ತಾನೂ ವಿಷ ಕುಡಿದ ತಂದೆ
ಇದನ್ನೂ ಓದಿ : ಮಂಗಳೂರಲ್ಲಿ ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ : ಖ್ಯಾತ ವಕೀಲನ ವಿರುದ್ದ FIR
Two boys drowned in river Brahamavar