ಉಡುಪಿ : big relief to ks eshwarappa : ರಾಜ್ಯದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿ ರಿಪೋರ್ಟ್ನಲ್ಲಿ ಉಡುಪಿ ಪೊಲೀಸರು ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪ ಕುಮ್ಮಕ್ಕು ನೀಡಿದ್ದಾರೆ ಎಂಬ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ವರದಿ ನೀಡಿದ್ದಾರೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಟೌನ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಈ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳಲು ಈಶ್ವರಪ್ಪ ಕುಮ್ಮಕ್ಕು ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪರನ್ನು ವಿಚಾರಣೆಗೆ ಒಳಪಡಿಸಿಲ್ಲ ಎಂದು ಬಿ ರಿಪೋರ್ಟ್ನಲ್ಲಿ ಉಲ್ಲೇಖಿಸಲಾಗಿದೆ. ಸಿಸಿ ಟಿವಿ ದೃಶ್ಯಾವಳಿಗಳು, ಕುಟುಂಬಸ್ಥರು ಹಾಗೂ ಸ್ನೇಹಿತರ ಹೇಳಿಕೆ , ಎಲ್ಲವನ್ನೂ ಸಲ್ಲಿಕೆ ಮಾಡಲಾಗಿದೆ. ಈ ವರದಿಯನ್ನು ಕೋರ್ಟ್ ಇನ್ನೂ ಅಂಗಿಕಾರ ಮಾಡಿಲ್ಲ. ಕೋರ್ಟ್ ಬಿ ರಿಪೋರ್ಟ್ ಅಂಗೀಕಾರ ಮಾಡಿದ ಬಳಿಕ ಇದನ್ನು ಚಾಲೆಂಜ್ ಮಾಡಲು ದೂರುದಾರರಿಗೆ ಅವಕಾಶ ನೀಡಲಾಗುತ್ತದೆ
ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಧಾನಿ ಮೋದಿಗೂ ಪತ್ರ ಬರೆದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಬಿಜೆಪಿ ಕಾರ್ಯಕರ್ತ ಕೂಡ ಆಗಿದ್ದ ಸಂತೋಷ್ ಪಾಟೀಲ್ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಡಸ ಗ್ರಾಮದ ನಿವಾಸಿ. ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಟೆಂಡರ್ ಪಡೆಯದೇ ರಸ್ತೆ ಕಾಮಗಾರಿ ಮಾಡಿಸಿದ್ದ ಸಂತೋಷ್ ಪಾಟೀಲ್ ಬಳಿಕ ಈ ಕಾಮಗಾರಿಗೆ ಹಣ ಬಿಡುಗಡೆ ಮಾಡಿ ಎಂದು ಈಶ್ವರಪ್ಪ ಬಳಿ ಅನೇಕ ಬಾರಿ ಮನವಿ ಮಾಡಿದ್ದರು ಎನ್ನಲಾಗಿದೆ.
ಇದಾದ ಬಳಿಕ ಉಡುಪಿಯ ಲಾಡ್ಜ್ವೊಂದಕ್ಕೆ ಆಗಮಿಸಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೆ ಮುನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಹೇಳಿದ್ದರು. ವಿಪಕ್ಷಗಳ ಆಕ್ರೋಶ ಮಿತಿಮೀರುತ್ತಿದ್ದಂತೆಯೇ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಿದ್ದರು.
ಇದನ್ನು ಓದಿ : Ambulance hits Shiroor toll : ಶಿರೂರು ಟೋಲ್ ಕಂಬಕ್ಕೆ ಅಂಬ್ಯುಲೆನ್ಸ್ ಢಿಕ್ಕಿ : ಸಿಸಿ ಕ್ಯಾಮರಾದಲ್ಲಿ ಭೀಕರ ದೃಶ್ಯ ಸೆರೆ
ಇದನ್ನೂ ಓದಿ : Virat Kohli form : ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಳ್ಳಲು ಬಿಸಿಸಿಐ ಬಳಿಯಿದೆ ಜಬರ್ದಸ್ತ್ ಪ್ಲಾನ್
udupi police submits b report on santosh suicide case big relief to ks eshwarappa