big relief to ks eshwarappa : ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಬಿಗ್​ ರಿಲೀಫ್​

ಉಡುಪಿ : big relief to ks eshwarappa : ರಾಜ್ಯದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪಗೆ ಬಿಗ್​ ರಿಲೀಫ್​​​ ಸಿಕ್ಕಿದೆ. ಬಿ ರಿಪೋರ್ಟ್​ನಲ್ಲಿ ಉಡುಪಿ ಪೊಲೀಸರು ಸಂತೋಷ್​ ಪಾಟೀಲ್​ ಆತ್ಮಹತ್ಯೆಗೆ ಈಶ್ವರಪ್ಪ ಕುಮ್ಮಕ್ಕು ನೀಡಿದ್ದಾರೆ ಎಂಬ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ವರದಿ ನೀಡಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಟೌನ್​ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಈ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಸಂತೋಷ್​ ಪಾಟೀಲ್​ ಆತ್ಮಹತ್ಯೆ ಮಾಡಿಕೊಳ್ಳಲು ಈಶ್ವರಪ್ಪ ಕುಮ್ಮಕ್ಕು ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪರನ್ನು ವಿಚಾರಣೆಗೆ ಒಳಪಡಿಸಿಲ್ಲ ಎಂದು ಬಿ ರಿಪೋರ್ಟ್ನಲ್ಲಿ ಉಲ್ಲೇಖಿಸಲಾಗಿದೆ. ಸಿಸಿ ಟಿವಿ ದೃಶ್ಯಾವಳಿಗಳು, ಕುಟುಂಬಸ್ಥರು ಹಾಗೂ ಸ್ನೇಹಿತರ ಹೇಳಿಕೆ , ಎಲ್ಲವನ್ನೂ ಸಲ್ಲಿಕೆ ಮಾಡಲಾಗಿದೆ. ಈ ವರದಿಯನ್ನು ಕೋರ್ಟ್ ಇನ್ನೂ ಅಂಗಿಕಾರ ಮಾಡಿಲ್ಲ. ಕೋರ್ಟ್ ಬಿ ರಿಪೋರ್ಟ್ ಅಂಗೀಕಾರ ಮಾಡಿದ ಬಳಿಕ ಇದನ್ನು ಚಾಲೆಂಜ್​ ಮಾಡಲು ದೂರುದಾರರಿಗೆ ಅವಕಾಶ ನೀಡಲಾಗುತ್ತದೆ

ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್​ ಈಶ್ವರಪ್ಪ ಮೇಲೆ 40 ಪರ್ಸೆಂಟ್​ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಪ್ರಧಾನಿ ಮೋದಿಗೂ ಪತ್ರ ಬರೆದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ಬಿಜೆಪಿ ಕಾರ್ಯಕರ್ತ ಕೂಡ ಆಗಿದ್ದ ಸಂತೋಷ್​ ಪಾಟೀಲ್​ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಡಸ ಗ್ರಾಮದ ನಿವಾಸಿ. ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಟೆಂಡರ್​ ಪಡೆಯದೇ ರಸ್ತೆ ಕಾಮಗಾರಿ ಮಾಡಿಸಿದ್ದ ಸಂತೋಷ್​ ಪಾಟೀಲ್​ ಬಳಿಕ ಈ ಕಾಮಗಾರಿಗೆ ಹಣ ಬಿಡುಗಡೆ ಮಾಡಿ ಎಂದು ಈಶ್ವರಪ್ಪ ಬಳಿ ಅನೇಕ ಬಾರಿ ಮನವಿ ಮಾಡಿದ್ದರು ಎನ್ನಲಾಗಿದೆ.

ಇದಾದ ಬಳಿಕ ಉಡುಪಿಯ ಲಾಡ್ಜ್​ವೊಂದಕ್ಕೆ ಆಗಮಿಸಿದ್ದ ಸಂತೋಷ್​ ಪಾಟೀಲ್​ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೆ ಮುನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದ ಸಂತೋಷ್​ ಪಾಟೀಲ್​ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಹೇಳಿದ್ದರು. ವಿಪಕ್ಷಗಳ ಆಕ್ರೋಶ ಮಿತಿಮೀರುತ್ತಿದ್ದಂತೆಯೇ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಿದ್ದರು.

ಇದನ್ನು ಓದಿ : Ambulance hits Shiroor toll : ಶಿರೂರು ಟೋಲ್‌ ಕಂಬಕ್ಕೆ ಅಂಬ್ಯುಲೆನ್ಸ್‌ ಢಿಕ್ಕಿ : ಸಿಸಿ ಕ್ಯಾಮರಾದಲ್ಲಿ ಭೀಕರ ದೃಶ್ಯ ಸೆರೆ

ಇದನ್ನೂ ಓದಿ : Virat Kohli form : ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಳ್ಳಲು ಬಿಸಿಸಿಐ ಬಳಿಯಿದೆ ಜಬರ್ದಸ್ತ್ ಪ್ಲಾನ್

udupi police submits b report on santosh suicide case big relief to ks eshwarappa

Comments are closed.