Udupi School College Holiday Declared : ಉಡುಪಿ : ಪುಷ್ಯ ಮಳೆಯು ಕರಾವಳಿಯಲ್ಲಿ ಆರ್ಭಟಿಸುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅಗಸ್ಟ್ 1ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಮುಂದುವರಿದಿದ್ದು, ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಅಗಸ್ಟ್ 1 ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಣೆ ಮಾಡಿಲ್ಲ. ಆದರೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ. ಕಾಲೇಜಿಗೆ ಆಗಮಿಸುವಾಗ ಹಾಗೂ ಕಾಲೇಜಿನಿಂದ ಮನೆಗೆ ತೆರಳುವ ವೇಳೆಯಲ್ಲಿ ಮಕ್ಕಳ ಬಗ್ಗೆ ಕಾಲೇಜು ಪ್ರಾಂಶುಪಾಲರು ನಿಗಾ ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಶಿಥಿಲಗೊಂಡಿರುವ ಕಟ್ಟಡಗಳಲ್ಲಿ ಯಾವುದೇ ಕಾರಣಕ್ಕೂ ಪಾಠ ಪ್ರವಚನಗಳನ್ನು ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ಉಡುಪಿ : ಬಾರೀ ಮಳೆ, ರೆಡ್ ಅಲರ್ಟ್ : 4ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಮಳೆಯ ಧಾರಾಕಾರವಾಗಿ ಸುರಿಯುತ್ತಿದೆ. ಜುಲೈ 31 ರಂದು ಹವಾಮಾನ ಇಲಾಖೆಯ ಮುನ್ಸೂಚನೆ ಯಂತೆ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಆಯಾಯ ತಹಶೀಲ್ದಾರರು ರಜೆ ಘೋಷಣೆ ಮಾಡಿದ್ದರು. ಭಾರೀ ಗಾಳಿಯ ಜೊತೆಗೆ ಮಳೆ ಸುರಿಯುತ್ತಿದ್ದು ಕರಾವಳಿ ಭಾಗದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ : ವಯನಾಡ್ ಭೂಕುಸಿತ ಸಾವಿನ ಸಂಖ್ಯೆ 143 ಕ್ಕೆ ಏರಿಕೆ : ಮುಂದುವರಿದ ಮಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
Udupi School College Holiday Declared on August 1st Heavy Rain Red Alert News in Kannada