Udupi School Holiday august 2nd : ಉಡುಪಿ : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಮಳೆ ಮುಂದುವರಿಕೆಯಾಗಿದ್ದು, ನಾಳೆಯೂ ಕೂಡ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನಾಳೆಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿಲ್ಲ.
ಇದನ್ನೂ ಓದಿ : ಉಡುಪಿಯಲ್ಲಿ ಪುಷ್ಯ ಮಳೆ ಆರ್ಭಟ : ಅಗಸ್ಟ್ 1ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ, ಕಾರ್ಕಳ, ಉಡುಪಿ, ಹೆಬ್ರಿ, ಕಾರ್ಕಳ, ಬೈಂದೂರು ಸೇರಿದಂತೆ ಜಿಲ್ಲೆಯಾದ್ಯಂತ ಬಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಜೀವನದಿಗಳು ತುಂಬಿ ಹರಿಯುತ್ತಿವೆ. ಅದ್ರಲ್ಲೂ ವಾರಾಹಿ ನದಿಯಿಂದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ.
ಇದನ್ನೂ ಓದಿ : ಭೂಕುಸಿತ ಹೆಚ್ಚಳ, LSM ಮ್ಯಾಪಿಂಗ್‌ಗೆ ಹೆಚ್ಚಿನ ಬಜೆಟ್ ಮೀಸಲಿಡಿ : ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮನವಿ
Udupi School Holiday august 2nd Heavy Rain Red Alert