ಉಡುಪಿ : ಪುನರ್ವಸು ಮಳೆ ಕರಾವಳಿಯಲ್ಲಿ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಉಡುಪಿ ಜಿಲ್ಲೆಯಾದ್ಯಂತ ಜುಲೈ 18 ರಂದು ಧಾರಾಕಾರ ಮಳೆ ಸುರಿದಿದೆ. ಜುಲೈ 19 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಳಿದಂತೆ ಪದವಿ ತರಗತಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದು ಜಿಲ್ಲಾಡಳಿತ ತನ್ನ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?
ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ. ಆದರೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ, ಬೈಂದೂರು, ಕಾಪು, ಉಡುಪಿ, ಕಾರ್ಕಳ, ಹೆಬ್ರಿ, ಕುಂದಾಪುರ ತಾಲೂಕುಗಳಲ್ಲಿ ಭಾರೀ ಮಳೆ ಸುರಿದಿದೆ.

ಕಳೆದ ಕೆಲವು ದಿನಗಳಿಂದಲೂ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುಂದುವರಿಕೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲೀಗ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಗಳನ್ನು ಕೈಗೊಂಡಿದೆ.
ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆ ಯಜಮಾನಿಯರಿಗೆ ಭರ್ಜರಿ ಗುಡ್‌ನ್ಯೂಸ್
Udupi School Holiday July 19th Heavy Rain Alert