ಶನಿವಾರ, ಜೂನ್ 14, 2025
Homekarnatakaಉಡುಪಿ : ಜೂನ್‌ 13 ಶಾಲೆಗಳಿಗೆ ರಜೆ ಘೋಷಣೆ, ರೆಡ್‌ ಅಲರ್ಟ್‌

ಉಡುಪಿ : ಜೂನ್‌ 13 ಶಾಲೆಗಳಿಗೆ ರಜೆ ಘೋಷಣೆ, ರೆಡ್‌ ಅಲರ್ಟ್‌

ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

School Holiday : ಉಡುಪಿ : ನಿರಂತರವಾಗಿ ಸುರಿಯುತ್ತಿರುವ ಮಳೆ ನಾಳೆಯೂ ಮುಂದುವರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ ಶಾಲೆಗಳಿಗೆ ರಜೆ (School Holiday) ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಪದವಿ ಪೂರ್ವ ಕಾಲೇಜು, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Also Read : ಗೃಹಜ್ಯೋತಿ ಗ್ರಾಹಕರಿಗೆ ಸರಕಾರದ ವಂಚನೆ : ಮೆಸ್ಕಾಂ ಉದ್ಯೋಗಿಗಳ ಪಿಎಫ್‌ + ಗ್ರಾಚ್ಯುಟಿಗೆ ಗ್ರಾಹಕರ ಹಣ

Udupi School Holiday June 12 Heavy rain Red Alert Declared Udupi DC Vidya kumari Kannada News

ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆ ಜೂನ್‌ 15ರ ವರೆಗೂ ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್‌ 12ರಂದು ರಜೆ ಘೋಷಿಸಲಾಗಿತ್ತು.

Also Read : Ration Card ekyc : ಜೂನ್‌ 30 ಕೊನೆಯ ದಿನ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್‌ ಕಾರ್ಡ್‌

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್‌ 12ರಂದು ಬಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಕೆಲವು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಇದೀಗ ಜೂನ್‌ 13ರಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್‌ 13 ರಂದು ರಜೆ ಘೋಷಣೆ ಮಾಡಲಾಗಿದೆ.

Udupi School Holiday June 12 Heavy rain Red Alert Declared Udupi DC Vidya kumari Kannada News

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular