ಬೆಂಗಳೂರು : ಒಂದೆಡೆ ಯುದ್ಧಪೀಡಿತ ಉಕ್ರೇನ್ ನಿಂದ ಕರ್ನಾಟಕದ ಮಕ್ಕಳನ್ನು (Ukraine Return Students) ವಾಪಸ್ ಕರೆಯಿಸಿಕೊಳ್ಳುವುದು ಹೇಗೆ ಎಂಬ ಆತಂಕ ಮನೆ ಮಾಡಿದ್ದರೇ, ಇನ್ನೊಂದೆಡೆ ಬಹುತೇಕ ವೈದ್ಯಕೀಯ ಶಿಕ್ಷಣವನ್ನೇ ಪಡೆಯುತ್ತಿರುವ ಮಕ್ಕಳ ವಿದ್ಯಾಭ್ಯಾಸದ ಕತೇಯೇನು ಎಂಬ ಆತಂಕವೂ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡುತ್ತಿದೆ. ಆದರೆ ಈ ಆತಂಕಕ್ಕೆ ಈಗ ರಾಜ್ಯ ಸರ್ಕಾರ ತೆರೆ ಎಳೆದಿದೆ.

ಯುದ್ಧ ಭೀತಿಯಿಂದ ಶಿಕ್ಷಣವನ್ನು ಮೊಟಕುಗೊಳಿಸಿ ರಾಜ್ಯಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿಯೊಂದನ್ನು ಹೇಳಿದೆ. ಉಕ್ರೇನ್ ನಿಂದ ರಾಜ್ಯಕ್ಕೆ ಹಿಂತಿರುಗಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಕರ್ನಾಟಕದಲ್ಲಿ ಹಾಗೂ ದೇಶದಲ್ಲಿ ಮುಗಿಸಲು ಅವಕಾಶವಿದೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳ ಪರ ನಿಲುವು ತಳೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಉಕ್ರೇನ್ ನಿಂದ ಹಿಂತಿರುಗಿರುವ ( Ukraine Return Students) ಇಂಜಿನಿಯರಿಂಗ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಯಾವುದೇ ತೊಂದರೆ ಇಲ್ಲ. ಅವರಿಗೆ ಇಲ್ಲಿ ಶಿಕ್ಷಣಕ್ಕೆ ಅವಕಾಶಗಳಿವೆ. ಆದರೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವವರಿಗೆ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಲು ಇಲ್ಲಿ ಕೆಲವೊಂದು ಮಿತಿಗಳಿವೆ. ಆದರೆ ಈ ಕುರಿತು ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಲು ಮಾತುಕತೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅಶ್ವತ್ಥನಾರಾಯಣ್ ಭರವಸೆ ನೀಡಿದ್ದಾರೆ.
Students continuously returning to India from Ukraine, On average 269 Indian students are returning from almost every flight.
— ADV. ASHUTOSH J. DUBEY 🇮🇳 (@AdvAshutoshBJP) February 26, 2022
The Government of India has made free arrangements for their return!🙏🇮🇳https://t.co/Eu3GN8OUCm pic.twitter.com/E6rXaneiMR
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಮಕ್ಕಳ ಬಗ್ಗೆ ಕಳಕಳಿ ಹೊಂದಿದ್ದು ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅಶ್ವತ್ಥನಾರಾಯಣ್ ಹೇಳಿದ್ದಾರೆ. ಉಕ್ರೇನ್ ನಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ವೈದ್ಯಕೀಯ ವೆಚ್ಚ ಕಡಿಮೆ ಎನ್ನುವ ಕಾರಣಕ್ಕೆ ರಾಜ್ಯದ ಅಂದಾಜು 700 ಕ್ಕೂ ಹೆಚ್ಚು ಮಕ್ಕಳು ಉಕ್ರೇನ್ ನಲ್ಲಿ ಶಿಕ್ಷಣ ಪಡೆಯಲು ತೆರಳಿದ್ದರು. ಆದರೆ ಈಗ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿರೋದರಿಂದ ಕರ್ನಾಟಕದ ಮಕ್ಕಳು ಅತಂತ್ರ ಸ್ಥಿತಿಯಲ್ಲಿದ್ದು, ತಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆಸಿಕೊಳ್ಳುವಂತೆ ಮನವಿ ಮಾಡುತ್ತಿದ್ದಾರೆ. ಈಗಾಗಲೇ ಹಲವು ವಿಮಾನಗಳಲ್ಲಿ ದೇಶದ ಸಾವಿರಕ್ಕೂ ಅಧಿಕ ಮಕ್ಕಳು ಹಾಗೂ ರಾಜ್ಯದ 50 ಕ್ಕೂ ಹೆಚ್ಚು ಮಕ್ಕಳನ್ನು ಕರೆ ತರಲಾಗಿದೆ.
ಇದನ್ನೂ ಓದಿ : Namma metro : ಮೆಟ್ರೋದಿಂದ ಕಡಿಮೆಯಾಯ್ತು ಬೆಂಗಳೂರು ನಗರದ ವಾಯುಮಾಲಿನ್ಯ
ಇದನ್ನೂ ಓದಿ : ಯುದ್ಧಕ್ಕಿಂತ ಮುನ್ನವೇ ಭಾಷೆ, ಸಂಸ್ಕೃತಿಯನ್ನು ಹತ್ತಿಕ್ಕಿ ಉಕ್ರೇನನ್ನು ವಶಪಡಿಸಿಕೊಂಡಿದೆ ರಷ್ಯಾ; ಭದ್ರ ಭವಿಷ್ಯಕ್ಕಾಗಿ ಬೇಕು ಭಾಷೆ
(Ukraine return students study in Karnataka says CM Basavaraj Bommai)