Shiruru Land Slide 7 Death: ಕಾರವಾರ : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನ ಬಳಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿತ ಉಂಟಾಗಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಓರ್ವನ ಮೃತದೇಹ ಪತ್ತೆಯಾಗಿದ್ದು, ನಾಪತ್ತೆ ಆಗಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಗುಡ್ಡ ಕುಸಿತ ಉಂಟಾಗುತ್ತಿದ್ದ ವೇಳೆಯಲ್ಲಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ಹಾಗೂ ಕಾರಿನ ಮೇಲೆ ಬೃಹತ್ ಗಾತ್ರದ ಮಣ್ಣು ಕುಸಿದಿದೆ. ಇದರಿಂದಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ್, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನಾಥ್, ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಒಟ್ಟು ಒಂಬತ್ತು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿನ ಗುಡ್ಡದ ಬಳಿಯಲ್ಲಿ ಟ್ಯಾಂಕರ್ ನಿಲ್ಲಿಸಿ ಚಾಲಕ ಹಾಗೂ ಕ್ಲೀನರ್ ಚಹಾ ಕುಡಿಯುತ್ತಿದ್ದರು. ಈ ವೇಳೆಯಲ್ಲಿ ಏಕಾಏಕಿಯಾಗಿ ಗುಡ್ಡ ಕುಸಿತ ಉಂಟಾಗಿದ್ದ, ಬೃಹತ್ ಗ್ಯಾಸ್ ಟ್ಯಾಂಕರ್ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಇನ್ನು ಮಣ್ಣಿನಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯ ಮುಂದುವರಿದಿದೆ.
ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್‌ಎಫ್ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುಡ್ಡ ಕುಸಿತ ಪ್ರಕರಣದಲ್ಲಿ ಒಟ್ಟು ಏಳು ಮಂದಿ ಸಾವನ್ನಪ್ಪಿರುವುದನ್ನು ಖಚಿತ ಪಡಿಸಿದ್ದಾರೆ. ಮಣ್ಣಿನಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯ ಭರದಿಂದ ನಡೆಯುತ್ತಿದೆ.
ಇದನ್ನೂ ಓದಿ : Udupi Red Alert Heavy Rain : ಬನ್ನಾಡಿ, ಮಟಪಾಡಿ, ಗಿಳಿಯಾರು ಜಲಾವೃತ : ಪುನರ್ವಸು ಬಾರೀ ಮಳೆಗೆ ತತ್ತರಿಸಿದ ಉಡುಪಿ ಜಿಲ್ಲೆ
ಹೊನ್ನಾವರ- ಬೆಂಗಳೂರು ಹೆದ್ದಾರಿಯಲ್ಲೂ ಗುಡ್ಡ ಕುಸಿತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಭಾಸ್ಕೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಭಾರೀ ಗುಡ್ಡ ಕುಸಿದು ಬೆಂಗಳೂರು – ಹೊನ್ನಾವರ ಸಂಪರ್ಕ ಕಡಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ಗುಡ್ಡ ಕುಸಿತವಾಗಿದ್ದು, ಬೃಹತ್ ಗಾತ್ರದ ಬಂಡೆ ಹೆದ್ದಾರಿ ಉರುಳಿ ಬಿದ್ದಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದಾರೆ.
ಇದನ್ನೂ ಓದಿ : 3 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ನಿಮ್ಮ ಪಡಿತರ ಚೀಟಿ ಚಾಲ್ತಿಯಲ್ಲಿದ್ಯಾ ಚೆಕ್ ಮಾಡಿ
Uttara kannada Heavy rain Shiruru Land Slide 7 death one dead body found