ಮಂಗಳವಾರ, ಏಪ್ರಿಲ್ 29, 2025
Homekarnatakaನಾಳೆಯಿಂದ 3 ದಿನ ವಿಧಾನ ಮಂಡಲ ವಿಶೇಷ ಅಧಿವೇಶನ

ನಾಳೆಯಿಂದ 3 ದಿನ ವಿಧಾನ ಮಂಡಲ ವಿಶೇಷ ಅಧಿವೇಶನ

- Advertisement -

ಬೆಂಗಳೂರು : ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DCM DK Sivakumar) ನಿನ್ನೆ ಬೆಂಗಳೂರಿನ ಕಂಠೀರವ ಕ್ರೀಡಾಗಂಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ರಚನೆಯಾದ ಬೆನ್ನಲ್ಲೇ ಅಂದರೆ ನಾಳೆ ಸೋಮವಾರದಿಂದಲೇ (ಮೇ 22) ಮೊದಲ ವಿಧಾನಸಭೆ ಅಧಿವೇಶನ (Vidhan Mandal Special Session) ನಡೆಯಲಿದೆ. ಹಾಗೆಯೇ ಸೋಮವಾರದಿಂದ ಪ್ರಾರಂಭವಾಗಿ ಬುಧವಾರದವರೆಗೂ ಮೂರು ದಿನಗಳ ಕಾಲ ಅಧಿವೇಶನ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಸರಕಾರ ಅಧಿಕಾರ ಬಂದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮತನಾಡಿದ ಸಿಎಂ ಸಿದ್ದರಾಮಯ್ಯ, ಹಂಗಾವಿ ಸ್ಪೀಕರ್‌ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದು ಹೇಳಿದ್ದಾರೆ. ಹೀಗಾಗಿ ನಾಳೆ (ಮೇ 22) ನಡೆಯುವ ಅಧಿವೇಶನದ ಹಂಗಾಮಿ ಸಭಾಧ್ಯಕ್ಷರಾಗಿ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್‌.ವಿ. ದೇಶಪಾಂಡೆ ಇರಲಿದ್ದಾರೆ. ಎಲ್ಲಾ ಶಾಸಕರ ಪ್ರಮಾಣವಚನ ಸ್ವೀಕಾರದ ನಂತರ ಸಭಾಪತಿ ಆಯ್ಕೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ : 200 ಯುನಿಟ್ ಉಚಿತ ವಿದ್ಯುತ್ ಸೇರಿ ಯಾವ ಭರವಸೆಯೂ ಈಡೇರುವುದಿಲ್ಲ : ಶಾಸಕ ಕಾರ್ಕಳ ಸುನಿಲ್‌ ಕುಮಾರ್‌

ಇದನ್ನೂ ಓದಿ : ಮಹಿಳೆಯರ ಖಾತೆಗೆ 2 ಸಾವಿರ, ಬಸ್ಸುಗಳಲ್ಲಿ ಉಚಿತ ಪ್ರಯಾಣ : ಅಧಿಕೃತ ಆದೇಶ

ಸದ್ಯ ಈ ಮೊದಲು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ. ಮಾಧ್ಯಮದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾವು ನೀಡಿದ ಐದು ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಹಾಗೆಯೇ ಇದರಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಈ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಆರಂಭ : ರಾಹುಲ್ ಗಾಂಧಿಯಿಂದ 5 ಗ್ಯಾರಂಟಿ ಘೋಷಣೆ

Vidhan Mandal Special Session for 3 days from tomorrow

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular