ಕುಡಿದ ಮತ್ತಲ್ಲಿ ಅಡ್ಡಾಡಿದ್ದಿ ಕಾರು ಚಲಾಯಿಸಿ ಅಪಘಾತ : ಮಹಿಳೆಯಿಂದ ಚಾಲಕನಿಗೆ ಚಪ್ಪಲಿ ಸೇವೆ

ವಿಜಯನಗರ (Vijayapura) : ಮದ್ಯಪಾನ ಮಾಡಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಅಪಘಾತವೆಸಗಿದ ಕಾರು ಚಾಲಕನಿಗೆ ಮಹಿಳೆಯೋರ್ವರು ಚಪ್ಪಲಿ ಸೇವೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಜಯಪುರ (Vijayapura) ನಗರ ಸ್ಟೇಷನ್‌ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲಕ ವಿಪರೀತ ಕುಡಿದು ಕಾರು ಚಲಾಯಿಸಿದ್ದಾನೆ. ಇದರಿಂದಾಗಿ ಕಾರು 2 ಆಟೋ ಹಾಗೂ 1 ಬೈಕ್‌ಗೆ ಢಿಕ್ಕಿ ಹೊಡೆದಿದೆ. ಹೀಗಾಗಿ ಆಟೋ ಪಲ್ಟಿಯಾಗಿದ್ದು, ಇದರಿಂದ ಕೋಪಗೊಂಡ ಆಟೋದಲ್ಲಿ ಪ್ರಯಾಣಿಕ ಮಹಿಳೆ ಕಾರು ಚಾಲಕನಿಗೆ ಚಪ್ಪಲಿಯಿಂದ ಥಳಿಸಿದ್ದಾಳೆ. ಈ ವೇಳೆಯಲ್ಲಿ ಸ್ಥಳೀಯರು ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ಬೈಕ್‌ ಚಾಲಕ ಸಣ್ಣಪುಟ್ಟ ಗಾಯಗೊಂಡು ಪಾರಾಗಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯಿಂದ ಥಳಿತಕ್ಕೆ ಒಳಗಾಗಿ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : PAN-Aadhaar Link Check : ನಿಮ್ಮ ಪಾನ್‌ ಆಧಾರ್‌ನೊಂದಿಗೆ ಲಿಂಕ್‌ ಆಗಿದೆಯ್ಯಾ ಎಂದು ಇಲ್ಲಿ ಪರಿಶೀಲಿಸಿ

ಇದನ್ನೂ ಓದಿ : PM Kisan Yojana Updates : ಶೀಘ್ರದಲ್ಲೇ ರೈತರ ಖಾತೆಗೆ ಜಮೆ ಆಗಲಿದೆ 14 ನೇ ಕಂತು

ಖಾಸಗಿ ಬಸ್‌ಗೆ ಟ್ರಕ್‌ ಢಿಕ್ಕಿ : 4 ಸಾವು, 14 ಮಂದಿ ಗಾಯ

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಬಸ್ ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಾಜಾಪುರದ ಮಕ್ಸಿ ಪಟ್ಟಣದ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಪ್ರಕಾರ, ಬಸ್ಸು ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಿಂದ ಅಹಮದಾಬಾದ್‌ಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಯಾಣಿಸುತ್ತಿದ್ದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಶಾಜಾಪುರದ ದೊಂಟ ಗ್ರಾಮದ ಬಳಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಒಳಗಾದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಅಪ್ರಾಪ್ತರು ಸೇರಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಜ್ಜಯಿನಿಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು. ಈ ಅಪಘಾತಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದು, ಮೃತಪಟ್ಟವರ ದೇಹವನ್ನು ಸಂಬಂಧಪಟ್ಟವರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.