ವಿಶ್ವ ವಿಖ್ಯಾತ ಮೈಸೂರು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮೈಸೂರು : ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅರಮನೆ ವೀಕ್ಷಣೆಗೆ ಪ್ರವಾಸಿಗ ರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರು ತಿಳಿಸಿದ್ದಾರೆ.

ಕೊರೊನಾ ವೈರಸ್‌ ಸೋಂಕು ಆರಂಭವಾದ ನಂತರದಲ್ಲಿ ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಆದರೆಗೆ ಸೋಂಕಿನ ಪ್ರಮಾಣ ತಗ್ಗಿದ ನಂತರದಲ್ಲಿ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ಇದೀಗ ಆ.21 ಮತ್ತು 22ರ ಶನಿವಾರ ಮತ್ತು ಭಾನುವಾರದಂದು ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದೆ.

ಇದನ್ನೂ ಓದಿ : MYSORE : ವೀಕೆಂಡ್‌ ಲಾಕ್‌ಡೌನ್‌ಗೆ ವಿರೋಧ : ವರ್ತಕರಿಗೆ ಬೆಂಬಲ ಸೂಚಿಸಿದ ಸಚಿವ ಸೋಮಶೇಖರ್‌

ಕಳೆದ ಎರಡು ವಾರಗಳಿಂದಲೂ ಮೈಸೂರಿನಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದ್ದು, ಚಾಮುಂಡಿ ಬೆಟ್ಟ, ಮೈಸೂರು ಅರಮನೆ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಗಳಿಗೆ ನಿರ್ಬಂಧ ಹೇರಲಾಗಿದೆ. ಈ ವಾರವೂ ನಿರ್ಬಂಧ ಮುಂದುವರಿದಿದೆ ಎಂದು ತಿಳಿದುಬಂದಿದೆ.

ದನ್ನೂ ಓದಿ : ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್‌ಡೌನ್‌ : ಗಡಿ ಜಿಲ್ಲೆಗಳಲ್ಲಿ ರೂಲ್ಸ್‌ ಇನ್ನಷ್ಟು ಟೈಟ್

Comments are closed.