ಬೆಂಗಳೂರು: (Weather forecast) ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ ಕಳೆದೊಂದು ವಾರದಿಂದ ಹಗುರ ಮಳೆಯಾಗಿತ್ತು. ಇಂದು ಕೂಡ ಮಲೆನಾಡು ಮತ್ತು ಕರಾವಳಿಯಲ್ಲಿ ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇದೀಗ ಮಳೆಯ ವಾತಾವರಣ ಕಡಿಮೆಯಾಗಿದ್ದು, ಇಂದಿನಿಂದ ಮತ್ತೆ ಚಳಿಯ ವಾತಾವರಣ ಹೆಚ್ಚಾಗುವ ನಿರೀಕ್ಷೆಯಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ (Weather forecast) ಮಳೆಯಾಗುತ್ತಿದೆ. ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಮೈಸೂರಿನಲ್ಲಿ ಇಂದಿನಿಂದ ಡಿ. 4ರವರೆಗೂ ಮಳೆಯಾಗಲಿದೆ. ಚಳಿಯ ಜೊತೆಗೆ ತುಂತುರು ಮಳೆಯೂ ಮುಂದುವರೆಯುವ ನಿರೀಕ್ಷೆಯಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಬೆಳಗ್ಗೆ ಚಳಿಯ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನಿಂದ 2 ದಿನಗಳ ಕಾಲ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ, ಕೇರಳ, ಮಾಹೆ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾದ್ಯತೆಗಳು ಹೆಚ್ಚಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : Life threat to Pramod Muthalik: ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ : ದೂರು ದಾಖಲು
ಇದನ್ನೂ ಓದಿ : Honey trap: ಮುಖ ನೋಡಿಲ್ಲ.. ಪರಸ್ಪರ ಭೇಟಿ ಮಾಡಿಲ್ಲ; ಕೇವಲ ಫೇಸ್ ಬುಕ್ ಡಿಪಿಗೆ ಮರುಳಾಗಿ ಆತ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!
ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ, ಕೇರಳ, ಮಾಹೆ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ದಕ್ಷಿಣ ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತವಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಡಿಸೆಂಬರ್ 5ರ ವರೆಗೆ ಇದೇ ವಾತಾರಣ ಮುಂದುವರಿಯಲಿದೆ. ಮುಂದಿನ 48 ಗಂಟೆಗಳಲ್ಲಿ ಈ ಚಂಡಮಾರುತ ಬಂಗಾಳ ಕೊಲ್ಲಿಯತ್ತ ಸಾಗಲಿದ್ದು. ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಶೀತಮಿಶ್ರಿತ ವಾತವಾರಣ ಒಂದು ವಾರ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
(Weather forecast) Coastal, mountainous and northern interior parts of Karnataka have received light rain for the past week. Rain with lightning is forecast in hilly and coastal areas today too. Now the rainy weather has reduced and the cold weather is expected to increase again from today.