Karnatak Weather Report : ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ : ಆರೆಂಜ್ ಅಲರ್ಟ್

ಬೆಂಗಳೂರು : ಕಳೆದೊಂದು ವಾರದಿಂದಲೂ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಸದ್ಯಕ್ಕೆ ವರುಣನ ಆರ್ಭಟ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯ ರಾಜ್ಯದ ಮೇಲೆ ಪ್ರಭಾವ ಬೀರಲಿದೆ. ಇದರಿಂದಾಗಿ ರಾಜ್ಯಾದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ: Weather Report : ಭಾರತದ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ

ಇಂದಿನಿಂದ ಅಕ್ಟೋಬರ್ 9 ರವರೆಗೆ ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ (Orange Alert ) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Gulab Cyclone : ಇನ್ನೂ ಗುಲಾಬ್ ಚಂಡಮಾರುತದ ಅಬ್ಬರ : ಹವಾಮಾನ ಇಲಾಖೆ ಎಚ್ಚರಿಕೆ, 3 ದಿನ ಭಾರೀ ಮಳೆ

(Heavy rain over the next three days: Orange Alert)

Comments are closed.