Karnataka Weather Report : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆರಾಯನ ಆರ್ಭಟ ಜೊರಾಗಿದೆ. ಮಳೆ ಹೆಚ್ಚಿನ ರೀತಿಯಲ್ಲಿ ಮಳೆಯಾಗುತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಪರಿಣಾಮದಿಂದಾಗಿ ರಾಜ್ಯದ ನಾನಾ ಭಾಗಗಳಲ್ಲಿ ನಿನ್ನೆಯಿಂದ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ.ೆ

ನಿನ್ನೆಯಿಂದ ಭಾರಿ ಮಳೆಯಾಗುತ್ತಿರುವುದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೇ ಈ ನಡುವೆ ಬೆಂಗಳೂರಿನ ಭಾರಿ ಮಳೆಯಾಗಲಿರುವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: Karnatak Weather Report : ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆ : ಆರೆಂಜ್ ಅಲರ್ಟ್

ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Mysore Dasara : 411ನೇ ಮೈಸೂರು ದಸರಾ ಉತ್ಸವಕ್ಕೆ ಚಾಲನೆ : ಯಾವ ಜನ್ಮದ ಪುಣ್ಯವೋ ಎಂದ ಎಸ್‌ಎಂಕೆ

(Karnataka Weather Report)

Comments are closed.