Karnataka Weather Report : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದಲೂ ಮಳೆಯಾಗುತ್ತಿದ್ದು. ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನ ಮುಂದುವರೆಯಲಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದಿನಿಂದ ಅಕ್ಟೋಬರ್ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Weather Report : ಭಾರತದ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ

ಇನ್ನು ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Gulab Cyclone : ಇನ್ನೂ ಗುಲಾಬ್ ಚಂಡಮಾರುತದ ಅಬ್ಬರ : ಹವಾಮಾನ ಇಲಾಖೆ ಎಚ್ಚರಿಕೆ, 3 ದಿನ ಭಾರೀ ಮಳೆ

(Karnataka Weather Report)

Comments are closed.