Weather report: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: Weather report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಈ ಮಳೆ ಇನ್ನೂ 2 ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆ ಸುರಿಯುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇದನ್ನೂ ಓದಿ: Guddattu shri vinayaka temple: ಕಲ್ಲು ಬಂಡೆಯ ನಡುವೆ ಮೂಡಿಬಂದ ಬಲಮುರಿ ಗಣಪ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಬಳಿಕ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ಮಳೆಯ ಜೊತೆಯೂ ಚಳಿಯೂ ಇತ್ತು. ಆದರೆ ಗುರುವಾರದ ಬಳಿಕ ಮಳೆ ಪ್ರಮಾಣ ಕಡಿಮೆಯಾಗಿದೆ. ಚಳಿಯ ವಾತಾವರಣವಿದೆ. ಆದರೆ ಮುಂದಿನ 2 ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ನಿನ್ನೆ ಬಂಗಾಳಕೊಲ್ಲಿಯ ಮಧ್ಯಭಾಗಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇದೆ ಎಂದು ಹೇಳಿತ್ತು. ಈಶಾನ್ಯ ಮಾನ್ಸೂನ್ ಮಾರುತವು ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಇದನ್ನೂ ಓದಿ: Kashmir Files: ‘ದಿ ಕಾಶ್ಮೀರ್ ಫೈಲ್ಸ್’ ಒಂದು ಅಶ್ಲೀಲ ಸಿನಿಮಾ ಎಂದ ಚಲನಚಿತ್ರೋತ್ಸವ ತೀರ್ಪುಗಾರ

ಇಂದು ದಕ್ಷಿಣ ಭಾರತದಲ್ಲಿ ಅದರಲ್ಲೂ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕ ಕರಾವಳಿ ಜಿಲ್ಲೆಗಳಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather report: Depression in Bay of Bengal Karnataka Rain Moderate Rainfall Continues on November 29th

Comments are closed.