Weather Report : ಕರ್ನಾಟಕದಲ್ಲಿ 3 ಬಾರೀ ಮಳೆ : ಇಂದು ಯೆಲ್ಲೋ ಅಲರ್ಟ್

ಬೆಂಗಳೂರು : ( Weather Report) ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜಧಾನಿ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದ್ದು, ಕರಾವಳಿ , ಮಲೆನಾಡು , ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಇವೆ.ಮೈಸೂರು , ಚಿಕ್ಕಮಗಳೂರು, ಚಾಮರಾಜನಗರ, ಹಾಸನ , ಕೊಡಗು, ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಲ್ಲಿ ಹವಮಾನ ಇಲಾಖೆ ( Weather Report ) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿ , ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ಗುಡುಗು ಸಹಿತ ಸಿಡಿಲಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದು ನಾಡಿನ ಜನತೆ ಎಚ್ಚರಿಕೆಯಿಂದ ಇರುವುದಾಗಿ ಇಲಾಖೆ ತಿಳಿಸಿದೆ.

ಇದನ್ನೂ ಓದಿ : BUS FIRE ACCIDENT : ಖಾಸಗಿ ಬಸ್ ಹೊತ್ತಿ ಉರಿದು 11 ಮಂದಿ ದುರ್ಮರಣ

ಇದನ್ನೂ ಓದಿ : SC ST Reservation: ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಗಿಫ್ಟ್ , ಬಿಜೆಪಿ ಮೀಸಲಾತಿ ಬ್ರಹ್ಮಾಸ್ತ್ರ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಬೆಂಗಳೂರು ,ಕೋಲಾರ , ಚಿಕ್ಕಬಳ್ಳಾಪುರದ ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿ ಇದೀಗ ದಕ್ಷಿಣ ಕರಾವಳಿಯತ್ತ ಸಾಗುತ್ತಿದ್ದು, ಸಮುದ್ರ ಮಟ್ಟದಿಂದ ಸುಮಾರು 3.5 ಕಿ.ಮೀ. ಎತ್ತರದಲ್ಲಿದೆ. ಬಂಗಾಳ ಕೊಲ್ಲಿಯ ಪಶ್ಚಿಮ ಬಾಗದಲ್ಲಿ ಉಂಟಾಗಿದ್ದ ಇನ್ನೊಂದು ಮೇಲ್ಮೈ ಸುಳಿಗಾಳಿಯು ಇನ್ನೂ ದುರ್ಬಲಗೊಳ್ಳದ ಕಾರಣ ಕರ್ನಾಟಕದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : BJP CONG FIGHT : ವಾಮ ಮಾರ್ಗದಲ್ಲಿ ಸರ್ಕಾರ ರಚನೆ ಎಂದ ಸಿಎಂ ಬೊಮ್ಮಾಯಿ.. ಕಾಂಗ್ರೆಸ್ ಬಿಜೆಪಿ ಮಧ್ಯೆ ಫೇಕ್ ಫೈಟ್

ಅಕ್ಟೋಬರ್‌ ಎರಡನೇ ವಾರದಲ್ಲಿ ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶವಾಗಲಿದ್ದು , ಅಲ್ಲಿಯ ತನಕ ಮುಂಗರು ಮಳೆ ತಾಂಡವ ಆಡಲಿದೆ ಎಂದು ಹವಮಾನ ಇಲಾಖೆ ವರದಿಯನ್ನೊಪ್ಪಿಸಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ರಾಯಚೂರು , ಬೀದರ್‌, ಗುಲ್ಬರ್ಗಾ, ಹಾವೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಿನೇ ದಿನೇ ಬಿಟ್ಟು ಬಿಡದಂತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗಲಿದ್ದು, ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗಲಿದೆ. ಭಾರತದ ಬಹುತೇಕ ರಾಜ್ಯಗಳಲ್ಲಿ ಇಂದು ಹೆಚ್ಚಿನ ಮಳೆಯಾಗಲಿದ್ದು , ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ನಿನ್ನೆ ಸುರಿದ ಭಾರೀ ಮಳೆಗೆ ಧಾರವಾಡ( Darawada ) ಜಿಲ್ಲೆಯಲ್ಲಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಜನರು ಪರದಾಡುವಂತಾಗಿತ್ತು. ಒಂದೆಡೆಯಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಖಾಸಗಿ ಬಸ್‌ ಒಂದರಲ್ಲಿ ನೀರು ತುಂಬಿದ ರಸ್ತೆಯಲ್ಲಿ ಪರದಾಡುವಂತಾಗಿತ್ತು. ಟ್ರ್ಯಾಕ್ಟರ್‌ ಬಳಸಿ ಖಾಸಗಿ ಬಸ್‌ ಅನ್ನು ನೀರು ತುಂಬಿದ ರಸ್ತೆಯಿಂದ ಎಳೆದು ಹೊರತೆಗೆಯಲಾಗಿತ್ತು. ಇನ್ನೂ ಗದ್ದೆಗಳಿಗೆ ನೀರು ನುಗ್ಗಿ ರೈತರು ಬೆಳೆದ ಸಾವಿರಾರು ಎಕರೆ ಬೆಳೆ ನಾಶವಗಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಧಾರವಾಡ ಜಿಲ್ಲೆಯಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೋಡಿದ್ದು, ಜನರು ಪರದಾಡುವಂತಾಗಿದೆ.

(Weather Report) The Meteorological Department has forecast rain in Karnataka for the next three days. The Meteorological Department has forecast that there will be rain for three days in capital Bangalore, Malnadu and coastal districts. In this background, yellow alert has been announced today.

Comments are closed.