ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ( Karnataka Rain Alert ) ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ. ಅಲ್ಲದೇ ದಕ್ಷಿಣ ಒಳನಾಡಿನಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿಯನ್ನು ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಕಳೆದ ಹಲವು ದಿನಗಳ ಹಿಂದೆಯಷ್ಟೇ ಭಾರಿ ಅವಾಂತರವನ್ನು ಸೃಷ್ಟಿಸಿದ್ದ ಮಳೆ ಮತ್ತೆ ಆರ್ಭಟಿಸಲಿದೆ. ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಕೊಡಗು, ಹಾನಸ, ಕೊಡಗು, ಮಂಡ್ಯ, ಹಾಸನ, ರಾಮನಗರ, ಚಾಮರಾಜ ನಗರಗಳಲ್ಲಿ ನವೆಂಬರ್ 13ರ ವರೆಗೆ ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಎಚ್ಚರಿಕೆಯನ್ನು ನೀಡಲಾಗಿದೆ.
ಈ ಬಾರಿ ಅಕಾಲಿಕ ಮಳೆಯಿಂದಾಗಿ ರಾಜ್ಯದ ರೈತರು ತತ್ತರಿಸಿ ಹೋಗಿದ್ದಾರೆ. ಕರಾವಳಿ ಭಾಗದಲ್ಲಿ ಭತ್ತದ ಕಟಾವು ಕಾರ್ಯ ನಡೆಯುತ್ತಿದ್ದು, ಎರಡು ದಿನಗಳ ಕಾಲ ಮಳೆಯಾಗುವ ಭೀತಿಯಿಂದಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈರುತ್ಯ ಮುಂಗಾರು ಬಂಗಾಳಕೊಲ್ಲಿಯಿಂದ ಹಾದು ತಮಿಳುನಾಡು ಕರಾವಳಿಯನ್ನು ಸಮೀಪಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ : Puneeth Rajkumar ಹಾದಿ ತುಳಿದ ಜಮೀರ್ : ನೇತ್ರದಾನಕ್ಕೆ ಸಹಿ ಹಾಕಿದ ಶಾಸಕ
ಇದನ್ನೂ ಓದಿ : ಕೋಟ : ಗೋ ಕಳ್ಳರ ವಾಹನ ಅಡ್ಡಗಟ್ಟಿದ ಹಸು : Video Viral
(Yellow Alert announces 3 days of heavy rains in Karnataka Rain Alert)