Yellow alert for 8 districts : ಕರ್ನಾಟಕದಲ್ಲಿ ನಿಲ್ಲದ ಮಳೆ : ಕರಾವಳಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: (Yellow alert for 8 districts) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ.

ಇನ್ನೇನು ಮಳೆಗಾಲ ಮುಗಿತು. ಚಳಿಗಾಲ ಶುರುವಾಯ್ತು ಅನ್ನೋ ಹೊತ್ತಿಗೆ ಮಳೆಯ ಅಬ್ಬರ ಜೋರಾಗಿದೆ. ಕಳೆದೊಂದು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕೂಡ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಇದರಿಂದ ಜನ ಆತಂಕಗೊಳ್ಳುವಂತೆ ಮಾಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ(Yellow alert for 8 districts) ಮಾಡಲಾಗಿದೆ.ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ.

ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿರುವ ಕಾರಣ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : RL Kashyap passed away : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸಂಶೋಧಕ ಆರ್.ಎಲ್ ಕಶ್ಯಪ್ ವಿಧಿವಶ

ಇದನ್ನೂ ಓದಿ : Statue of Kempegowda : ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಆಂಧ್ರಪ್ರದೇಶ, ಯಾನಂ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಸಾಕಷ್ಟು ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕರಾವಳಿ ಕರ್ನಾಟಕದಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನವೆಂಬರ್ 13ರವರೆಗೆ ಭಾರಿ ಮಳೆ ಮುಂದುವರಿಯಲಿದ್ದು, ನ. 14ರ ವೇಳೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ತಮಿಳುನಾಡು ಮಾತ್ರವಲ್ಲದೆ ಇಂದು ದಕ್ಷಿಣ ಭಾರತದ ಬೇರೆ ರಾಜ್ಯಗಳಲ್ಲೂ ಮಳೆ ಹೆಚ್ಚಾಗಲಿದೆ. ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ನವೆಂಬರ್ 13ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ತಮಿಳುನಾಡಿನಾದ್ಯಂತ ನಿನ್ನೆ(ನ.10) ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದೂ ಕೂಡ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ 23 ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ವೆಲ್ಲೂರು, ರಾಣಿಪೇಟ್​, ಕಡಲೂರು, ತಿರುವರೂರು, ನಾಗಪಟ್ಟಣಂ, ತಂಜಾವೂರು, ವಿಲ್ಲುಪುರಂ ಸೇರಿದಂತೆ ಹೆಚ್ಚಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

(Yellow alert for 8 districts) Heavy rains are likely to occur in many districts including Bengaluru today due to depression in the Bay of Bengal. Moderate rains will occur in the northern hinterland and coastal districts of Karnataka, and torrential rains are likely to occur in the southern hinterlands. Yellow Alert) has been announced.

Comments are closed.