Yellow alert : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ತಡರಾತ್ರಿ ಬಿರುಗಾಳಿ ಗುಡುಗು ಮಿಂಚಿನೊಂದಿಗೆ ಹಲವೆಡೆ ಜೋರಾಗಿ (Yellow alert in Karnataka) ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿರುತ್ತದೆ. ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ವರುಣ ಆರ್ಭಟ ಜೋರಾಗಲಿದ್ದು, ಯಲ್ಲೋ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.

ಇನ್ನು ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುವ ಮೊದಲು ಒಂದಷ್ಟು ಜಿಲ್ಲೆಗಳಲ್ಲಿ ವರುಣ ಆರ್ಭಟ ಜೋರಾಗಿದ್ದು, ಇನ್ನುಳಿದ ಭಾಗದಲ್ಲಿ ಸಾಧಾರಣ ಮಳೆ ಆಗಿರುತ್ತದೆ. ಆದರೆ ಕರಾವಳಿ ಭಾಗದಲ್ಲಿ ಕಳೆದ ವರ್ಷದಷ್ಟು ಇನ್ನು ಮಳೆ ಸುರಿದಿರುವುದಿಲ್ಲ. ಹಾಗಾಗಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಕಷ್ಟವಾಗಿದೆ. ಪ್ರತಿ ವರ್ಷ ಈ ಹೊತ್ತಿನ ಒಳಗೆ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತಿತ್ತು. ಈ ವರ್ಷ ಕೃಷಿಗೆ ಸಂಬಂಧಪಟ್ಟ ಚಟುವಟಿಕೆ ಭಾಗಶಃ ಕೂಡ ಶುರುವಾಗಿರುವುದಿಲ್ಲ.

ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಶಿವಮೊಗ್ಗದಲ್ಲಿ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಸೂಚಿಸಲಾಗಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಢ, ಗದಗ, ಹಾವೇರಿ ಕಲಬುರುಗಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ : Students bus pass validity : ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ, ಜೂನ್ 15ರ ವರೆಗೆ ಕೆಎಸ್ಆರ್ ಟಿಸಿ ಬಸ್ ಪಾಸ್ ವಿಸ್ತರಣೆ

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಬಿರುಗಾಳಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Yellow alert in Karnataka: Heavy rain is likely in many districts of Karnataka: Yellow alert announced

Comments are closed.