Yellow alert on the coast: ಕರಾವಳಿಯಲ್ಲಿ ನಾಳೆ ಭಾರೀ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: (Yellow alert on the coast) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯೂ ಕೂಡ ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಬೆಳಿಗ್ಗೆಯಿಂದಲೇ ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ ಸುರಿಯುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ(Yellow alert on the coast) ತಿಳಿಸಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಕಾರಣ, ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

ಇಂದು ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನವೆಂಬರ್ 15ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಇಂದು ಕೂಡ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ : Crime News: ಪತಿಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಂದ ಪತ್ನಿ ಮತ್ತು ಪ್ರಿಯಕರ

ಇದನ್ನೂ ಓದಿ : Diabetes in dogs : ನಾಯಿಗಳಿಗೆ ಡಯಾಬಿಟಿಸ್ ಕಾಟ : ಮುನ್ನೆಚ್ಚರಿಕೆಗಳೇನು ? ಚಿಕಿತ್ಸೆ ಏನು ? ಇಲ್ಲಿದೆ ಡಿಟೇಲ್ಸ್

ಇಂದು ರಾಯಲಸೀಮಾ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಕಷ್ಟು ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ಕರಾವಳಿ ಕರ್ನಾಟಕದಲ್ಲಿ ಚದುರಿದ ಮಳೆ ಸುರಿಯಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆಂಧ್ರಪ್ರದೇಶ, ಲಕ್ಷದ್ವೀಪ, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಸೇರಿದಂತೆ ಉತ್ತರ ಒಳನಾಡಿನಲ್ಲಿ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಅತೀ ಹೆಚ್ಚು ಮಳೆಯಾಗುವ ಹಿನ್ನಲೆಯಲ್ಲಿ ಎಂದು ಆರೆಂಜ್ ಅಲರ್ಟ್‌ ಅನ್ನು ಘೋಷಿಸಲಾಗಿದೆ.

(Yellow alert on the coast) In the wake of the depression in the Bay of Bengal, many districts including Bengaluru are likely to experience heavy rain for 3 days from today. Today there is a possibility of moderate rain in many parts of the coast and tomorrow too there will be heavy rain in the coast and yellow alert has been announced in the coastal parts, according to the Meteorological Department.

Comments are closed.