ಮಂಗಳೂರು : ಪ್ರವೀಣ್ ನೆಟ್ಟಾರು ಸಾವಿನ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ (surathkal) ಮಂಗಲಪೇಟೆ ಎಂಬಲ್ಲಿ ಯುವಕನೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಫಾಜಿಲ್ ಎಂಬಾತನೇ ಚಾಕುವಿನಿಂದ ಇರಿತಕ್ಕೆ ಒಳಗಾಗಿರುವ ಯುವಕ. ಮಂಗಲಪೇಟೆಯಲ್ಲಿನ ಅಂಗಡಿಯೊಂದಕ್ಕೆ ಬಟ್ಟೆ ಖರೀದಿ ಮಾಡಲು ಬಂದಿದ್ದ, ಈ ವೇಳೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಇನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಕೂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ : ನಿಷೇಧಾಜ್ಞೆ ಜಾರಿ
ಬಜ್ಪೆ, ಮೂಲ್ಕಿ, ಪಣಂಬೂರು ಹಾಗೂ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸಿಎಂ ಮಂಗಳೂರಿನಿಂದ ವಾಪಾಸಾಗುವ ಮುನ್ನವೇ ಮತ್ತೊಂದು ಹತ್ಯೆ ನಡೆದಿದ್ದು, ಜನರು ಭೀತಿಗೆ ಒಳಗಾಗಿದ್ದಾರೆ. ಸಂಜೆಯ ವೇಳೆಯಲ್ಲಿ ಮಸೀದಿಯಲ್ಲಿ ನಮಾಜ್ ಮಾಡಿ, ರಾತ್ರಿಯ 8.30 ವೇಳೆಯಲ್ಲಿ ತನ್ನ ಸ್ನೇಹಿತನ ಅಂಗಡಿಯೊಂದಕ್ಕೆ ಬಟ್ಟೆ ಖರೀದಿಗೆ ಬಂದಿದ್ದ ಫಾಜಿಲ್ ಎಂಬಾತನ ಮೇಲೆ ತಲವಾರಿನಿಂದ ಕಡಿದು ಕೊಲೆ ಮಾಡಲಾಗಿದೆ. ಅಂಗಡಿಯ ಹೊರಗಡೆ ತನ್ನ ಸ್ನೇಹಿತನ ಜೊತೆಯಲ್ಲಿ ಫಾಜಿಲ್ ಮಾತನಾಡುತ್ತಿದ್ದ ಈ ವೇಳೆಯಲ್ಲಿ ನಾಲ್ಕೈದು ಜನರ ಗುಂಪು ಏಕಾಏಕಿಯಾಗಿ ದಾಳಿ ನಡೆಸಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಫಾಜಿಲ್ ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಕಾರ್ಯವನ್ನು ಮಾಡಲಾಗಿದ್ದು, ಆದರೆ ಅಷ್ಟರಲ್ಲಾಗಲೇ ಫಾಜಿಲ್ ಪ್ರಾಣಪಕ್ಷಿ ಹಾರಿ ಹೋಗಿದೆ. ಇದೀಗ ಫಾಜಿಲ್ ಹತ್ಯೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು ಪ್ರವೀಣ್ ಮನೆಗೆ ಭೇಟಿ ನೀಡಿ ವಾಪಾಸಾಗುವ ಮುನ್ನವೇ ಈ ಹತ್ಯೆ ನಡೆದಿದೆ.
ಇನ್ನು ಫಾಜಿಲ್ ಹತ್ಯೆ ಪ್ರೀತಿಯ ವಿಚಾರದಲ್ಲಿ ಈ ಹತ್ಯೆ ನಡೆದಿದ್ದು, ಎರಡು ಮುಸ್ಲೀಂ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗುತ್ತಿದೆ. ಆದ್ರೆ ಪೊಲೀಸ್ ಹಿರಿಯ ಅಧಿಕಾರಿಗಳು ಈ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇನ್ನು ಫಾಜಿಲ್ ಹತ್ಯೆಯ ಬೆನ್ನಲ್ಲೇ ಮಂಗಳೂರಿನಾದ್ಯಂತ ಪೊಲೀಸ್ ಅಲರ್ಟ್ ಆಗಿದ್ದಾರೆ.
ಇದನ್ನೂ ಓದಿ : fazil murder : ಪ್ರವೀಣ್ ಹತ್ಯೆಯ ಬೆನ್ನಲ್ಲೇ ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ : ನಿಷೇಧಾಜ್ಞೆ ಜಾರಿ
ಇದನ್ನೂ ಓದಿ : Accused remanded in judicial custody : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಆರೋಪಿಗಳಿಗೆ ಆ.11ರವರೆಗೆ ನ್ಯಾಯಾಂಗ ಬಂಧನ
ಇದನ್ನೂ ಓದಿ : check of 25 lakh rupees : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ನೀಡಿದ ಸಿಎಂ ಬೊಮ್ಮಾಯಿ
Youth stabbed in surathkal, Police rushed to the spot