ನವದೆಹಲಿ: ಹೊಸ ಐಟಿ ನಿಯಮ ಜಾರಿಯಾದ ಬೆನ್ನಲ್ಲೇ ಭಾರತೀಯರ 20 ಲಕ್ಷ ಭಾರತೀಯ ಫೋನ್ ನಂಬರ್ ಗಳನ್ನು ವಾಟ್ಸಾಪ್ ನಿಷೇಧಿಸಿದೆ. ಸುಳ್ಳು ಸುದ್ದಿ, ನಕಲಿ ವಿಡಿಯೋ ಗಳನ್ನು ಹರಿಬಿಟ್ಟಿ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿದೆ ಎನ್ನಲಾಗುತ್ತಿದೆ.
ಭಾರತದಲ್ಲಿ ಮೇ 26 ರಂದು ಹೊಸ ಐಟಿ ನಿಯಮಗಳು ಜಾರಿಗೊಳಿಸಲಾಗಿದೆ. ಆ ಬಳಿಕ ದೇಶದಲ್ಲಿರುವ 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣಗಳು ಮತ್ತು ಮೆಸೇಂಜಿಂಗ್ ಆಪ್ಲಿಕೇಷನ್‌ಗಳು ಸರಕಾರಕ್ಕೆ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಇದನ್ನೂ ಓದಿ : ಕನ್ನಡದಲ್ಲೇ ನವೀಕರಿಸಬಹುದು ಆಧಾರ್ ಕಾರ್ಡ್ ಮಾಹಿತಿ
ವಾಟ್ಸಾಪ್ ಕಂಪೆನಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಅಗಸ್ಟ್ ತಿಂಗಳೊಂದರಲ್ಲೇ ಬರೋಬ್ಬರಿ 20,70,000 ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ಹೇಳಿದೆ. +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸಪ್ ತಿಳಿಸಿದೆ. ಹೊಸ ಐಟಿ ನಿಯಮದ ಪ್ರಕಾರ ನಕಲಿ ವಿಡಿಯೋ, ಸುಳ್ಳು ಸುದ್ದಿ ಪ್ರಸಾರ ಮಾಡುವುದು ಅಪರಾಧ. ಈ ಹಿನ್ನೆಲೆಯಲ್ಲೀಗ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿಯೇ ವಾಟ್ಸಾಸ್ ಈ ಕ್ರಮಕೈಗೊಂಡಿದೆ.
ಇದನ್ನೂ ಓದಿ : ಈ ಆಂಡ್ರಾಯ್ಡ್ ಪೋನ್‌ನಲ್ಲಿ ಇನ್ಮುಂದೆ ಓಪನ್ ಆಗಲ್ಲ ಯೂಟ್ಯೂಬ್, ಗೂಗಲ್ ಮ್ಯಾಪ್ಸ್, ಜಿಮೇಲ್ !
( WhatsApp Banned Over 2 Million Indian Accounts in August Month)