ಚಾರಣಕ್ಕೆ ತೆರಳುವವರಿಗೆ ಹೊಸ ನಿಯಮ..! ನೇಚರ್​ ಗೈಡ್​ ಇಲ್ಲದೇ ಟ್ರೆಕ್ಕಿಂಗ್​ಗೆ ಇಲ್ಲ ಅವಕಾಶ

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಪ್ರವಾಸಿಗರ ಸುರಕ್ಷತೆಯನ್ನು ಆದ್ಯತೆಯಾಗಿರಿಸಿ ಹೊಸ ನಿಯಮವಾಳಿಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅರಣ್ಯ ಇಲಾಖೆಗೆ ಒಳಪಡುವ ಎಲ್ಲಾ ಅನುಮೋದಿತ ಚಾರಣ ಪಥಗಳಲ್ಲಿ ನೇಚರ್​ ಗೈಡ್​ ಇಲ್ಲದೇ ಚಾರಣ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

ಚಾರಣಿಗರ ಸುರಕ್ಷತೆಗೆಂದೇ ಪ್ರಮಾಣಿತ ಕಾರ್ಯಾಚರಣೆ ವಿಧಾನ – ಎಸ್​ಓಪಿ ಪ್ರತಿ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಚಾರಣಕ್ಕೆ ಬರುವವರು ಆನ್​ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೇಚರ್​ ಗೈಡ್​ಗಳಿಗೆ ಜಿಪಿಎಸ್​ ಹೊಂದಿರುವ ವಾಕಿಟಾಕಿ ನೀಡಲಾಗುತ್ತದೆ.ಓರ್ವನೇ ಚಾರಣಕ್ಕೆ ಬಂದಿದ್ದರೂ ಆತನೂ ನೇಚರ್​ ಗೈಡ್​ ಜೊತೆಯೇ ಚಾರಣಕ್ಕೆ ತೆರಳಬೇಕು. ಅಲ್ಲದೇ ಪ್ರತಿಯೊಬ್ಬ ಚಾರಣಿಗರ ಮೊಬೈಲ್ ಗೆ ಚಾರಣಪಥದ ನಕ್ಷೆ ಸಹಿತ ಆಪ್ ಅನ್ನು ಅಳವಡಿಸಲಾಗುವುದು. ಅಕಸ್ಮಾತ್ ಯಾರೇ ಚಾರಣಿಗರು ದಾರಿ ತಪ್ಪಿದರೆ ಅವರ ಶೋಧಕ್ಕೆ ಈ ಆಪ್ ಸಹಕಾರಿಯಾಗಲಿದೆ ಎಂದರು. ಎಂದು ಹೇಳಿದ್ರು.

ಇದನ್ನೂ ಓದಿ: ರಾಜ್ಯದಲ್ಲೂ ಶೀಘ್ರದಲ್ಲೇ ಬರಲಿದ್ಯಾ ಮಹಾರಾಷ್ಟ್ರ ಮಾದರಿ ರೂಲ್ಸ್: ‘ಕನ್ನಡ್​ ಗೊತ್ತಿಲ್ಲ’ ಎನ್ನುವವರ ಡಿಎಲ್​ ರದ್ದು..!?

ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ ಸುರಕ್ಷತೆಗಾಗಿ ಈ ನಿಯಮಾವಳಿಗಳನ್ನು ಜಾರಿಗೆ ತಂದಿರುವುದಾಗಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »